-->
1000938341
'ನಾನು ಮುಗಿಸಿದ್ದೇನೆ' ವಿಚ್ಛೇದನ ವದಂತಿಗೆ ಪುಷ್ಠಿ ನೀಡಿದ ಸಾನಿಯಾ ಮಿರ್ಜಾ ಇನ್ ಸ್ಟಾಗ್ರಾಂ ಪೋಸ್ಟ್

'ನಾನು ಮುಗಿಸಿದ್ದೇನೆ' ವಿಚ್ಛೇದನ ವದಂತಿಗೆ ಪುಷ್ಠಿ ನೀಡಿದ ಸಾನಿಯಾ ಮಿರ್ಜಾ ಇನ್ ಸ್ಟಾಗ್ರಾಂ ಪೋಸ್ಟ್


ದುಬೈ: ಭಾರತದ ಟೆನ್ನಿಸ್​ ಕ್ರೀಡಾಪಟು ಸಾನಿಯಾ ಮಿರ್ಜಾ ಹಾಗೂ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಯಿಬ್​​ ಮಲಿಕ್ ದಾಂಪತ್ಯದಲ್ಲಿ ಬಿರುಕು ಮೂಡಿದೆ ಎಂಬ ಸುದ್ದಿ ಕೆಲವು ತಿಂಗಳಿನಿಂದ ಕೇಳಿ ಬರುತ್ತಿತ್ತು. ಆ ಬಳಿಕ ಈ ಸುದ್ದಿ ತಣ್ಣಗಾಗಿತ್ತು. ಇದೀಗ ಮತ್ತೊಮ್ಮೆ ಈ ಕ್ರೀಡಾ​ ದಂಪತಿಯ ವಿಚ್ಛೇದನ​ ವಿಚಾರ ಮುನ್ನೆಲೆಗೆ ಬಂದಿದೆ. ಸಾನಿಯಾ ಮಿರ್ಜಾ ಮಾಡಿರುವ ನಿಗೂಢ ಪೋಸ್ಟ್​ ಅದಕ್ಕೆ ಕಾರಣ.

ಇತ್ತೀಚೆಗೆ ಸಾನಿಯಾ ಮಿರ್ಜಾ ಇನ್​ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿರುವ ಸ್ಟೋರಿ ಇಬ್ಬರ ವಿಚ್ಛೇದನ​ ಸಂಗತಿಯನ್ನು ಮತ್ತೊಮ್ಮೆ ಮುನ್ನೆಲೆಗೆ ತಂದಿದೆ. ಅಷ್ಟಕ್ಕೂ ಅವರು ಬರೆದಿದ್ದೇನೆಂದರೆ, “ನಾನೇನಾದರೂ ಸಂವಹನ ಮಾಡುತ್ತಿದ್ದಲ್ಲಿ, ನಾನು ಕಾಳಜಿ ವಹಿಸುತ್ತೇನೆ. ನಾನು ಮೌನವಾಗಿದ್ದಲ್ಲಿ ನಾನು ಮುಗಿಸಿದ್ದೇನೆ” ಎಂಬ ಸಾಲುಗಳನ್ನು ಉಲ್ಲೇಖಿಸಿದ್ದಾರೆ. ಇದೀಗ ಈ ಒಂದು ಸಾಲು ನಾನಾ ಚರ್ಚೆಗಳಿಗೆ ಎಡೆ ಮಾಡಿಕೊಟ್ಟಿದೆ. ಇಬ್ಬರು ಡಿವೋರ್ಸ್​ ಆಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಮಾತನಾಡಿಕೊಳ್ಳುತ್ತಿದ್ದಾರೆ.


ಮೂಲಗಳ ಪ್ರಕಾರ ಸಾನಿಯಾ ಹಾಗೂ ಶೋಯಿಬ್​​ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ. ತಮ್ಮ ಪುತ್ರ ಇಝಾನ್​ಗೆ ಸಹ ಪಾಲಕರಾಗಿದ್ದಾರೆ ಎಂದು ಹೇಳಲಾಗಿದೆ. ವಿಚ್ಛೇದನದ​ ಬಗ್ಗೆ ಸಾಕಷ್ಟು ವದಂತಿಗಳು ಮುನ್ನೆಲೆಗೆ ಬಂದರೂ ಈ ಬಗ್ಗೆ ಅಧಿಕೃತವಾಗಿ ಇಬ್ಬರಿಂದಲೂ ಈವರೆಗೂ ಯಾವುದೇ ಹೇಳಿಕೆ ಬಂದಿಲ್ಲ. ಅಭಿಮಾನಿಗಳು ಕೂಡಾ ಇಬ್ಬರ ಹೇಳಿಕೆಗಾಗಿ ಕಾಯುತ್ತಿದ್ದಾರೆ. ಆದರೆ, ಸಾಮಾಜಿಕ ಜಾಲತಾಣದಲ್ಲಿ ನಿಗೂಢ ಪೋಸ್ಟ್​ ಹೊರತಾಗಿ ಯಾವುದೇ ಬೆಳವಣಿಗೆ ಕಾಣುತ್ತಿಲ್ಲ.

ಕೆಲವು ತಿಂಗಳುಗಳ ಹಿಂದೆ ಶೋಯಿಬ್​ ಮಲಿಕ್​ ಇನ್​ಸ್ಟಾಗ್ರಾಂ ಬಯೋದಲ್ಲಿ ಆಗಿರುವ ಬದಲಾವಣೆ ಕೂಡಾ ಈ ಸ್ಟಾರ್ ದಂಪತಿಯ ವಿಚ್ಛೇದನ​ ವದಂತಿಗೆ ಪುಷ್ಠಿ ನೀಡಿತ್ತು. ಈ ಮೊದಲು ಬಯೋದಲ್ಲಿ ಸೂಪರ್​ವುಮನ್​ ಸಾನಿಯಾ ಮಿರ್ಜಾರ ಪತಿ ಎಂದು ಶೋಯಿಬ್​ ಬರೆದುಕೊಂಡಿದ್ದರು. ಆದರೆ, ಅದನ್ನು ತೆಗೆದಿದ್ದಾರೆ. ಹೀಗಾಗಿ ಇಬ್ಬರ ಸಂಬಂಧದಲ್ಲಿ ಬಿರುಕು ಬಿಟ್ಟಿರುವುದು ಖಚಿತ ಎನ್ನಲಾಗಿತ್ತು.

ಅಂದಹಾಗೆ ಸಾನಿಯಾ ಮತ್ತು ಮಲಿಕ್​ ಪ್ರೇಮವಿವಾಹವು ಸಾಕಷ್ಟು ಚರ್ಚೆಗೆ ಎಡೆಮಾಡಿಕೊಟ್ಟರೂ ಎಲ್ಲ ವಿವಾದಗಳನ್ನು ಬದಿಗೊತ್ತಿ 2010ರಲ್ಲಿ ಇಬ್ಬರೂ ಮದುವೆ ಆಗಿದ್ದಾರೆ. ದಂಪತಿಗೆ ಇಝಾನ್​ ಮಿರ್ಜಾ ಮಲ್ಲಿಕ್ ಹೆಸರಿನ ಮಗನಿದ್ದಾನೆ. ಸದ್ಯ ಇಬ್ಬರೂ ಪ್ರತ್ಯೇಕವಾಗಿ ವಾಸಿಸುತ್ತಿದ್ದು, ಮಗ ಇಜಾನ್​ಗೆ ಸಹ-ಪೋಷಕರಾಗಿದ್ದಾರೆ ಎನ್ನಲಾಗುತ್ತಿದೆ.

ಕಳೆದ ವರ್ಷ ನವೆಂಬರ್​ 11ರಂದು ಸಾನಿಯಾ ಮಿರ್ಜಾ ಇನ್​ಸ್ಟಾಗ್ರಾಂನಲ್ಲಿ ಒಂದು ಪೋಸ್ಟ್​ ಹಾಕಿದ್ದರು. ಅದರಲ್ಲಿ “ಕಠಿಣ ದಿನಗಳು ಮತ್ತು ಒಡೆದ ಹೃದಯಗಳು” ಎಂದು ಬರೆದುಕೊಂಡಿದ್ದರು. ಅಲ್ಲಿಂದಾಚೆಗೆ ಇಬ್ಬರ ಬ್ರೇಕಪ್​ ವದಂತಿ ಹರಡಲು ಆರಂಭವಾಯಿತು. ಇದರ ನಡುವೆ ಒಮ್ಮೆ ಇಝಾನ್ ಜೊತೆಗಿನ ಮುದ್ದಾದ ಫೋಟೋವನ್ನು ಸಾನಿಯಾ ಹಂಚಿಕೊಂಡು, ಕಠಿಣ ದಿನಗಳಲ್ಲಿ ನನ್ನನ್ನು ಪಡೆಯುವ ಕ್ಷಣಗಳು ಎಂದು ಬರೆದಿದ್ದರು. ಇಷ್ಟೇ ಅಲ್ಲದೆ, ಶೋಯಿಬ್ ಮತ್ತು ಸಾನಿಯಾ ದುಬೈನಲ್ಲಿ ಇಜಾನ್‌ನ ನಾಲ್ಕನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿದರು. ಬರ್ತಡೇ ಪಾರ್ಟಿಯ ಅನೇಕ ಫೋಟೋಗಳನ್ನು ಶೋಯಿಬ್​​ ಹಂಚಿಕೊಂಡರೆ, ಸಾನಿಯಾ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಯಾವುದನ್ನೂ ಹಂಚಿಕೊಂಡಿಲ್ಲ ಇದು ಅನುಮಾನಗಳಿಗೆ ಕಾರಣವಾಗಿತ್ತು. 

Ads on article

Advertise in articles 1

advertising articles 2

Advertise under the article