ಒಂದೂವರೆ ವರ್ಷದ ಹಿಂದಷ್ಟೇ ವಿವಾಹವಾಗಿದ್ದ ಉದ್ಯಮಿ ಸೊಸೆ ನೇಣಿಗೆ ಶರಣು
Sunday, October 1, 2023
ಬೆಳಗಾವಿ: ಉದ್ಯಮಿಯೊಬ್ಬರ ಸೊಸೆ ಮನೆಯಲ್ಲಿ ನೇಣಿಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಘಟಪ್ರಭಾದಲ್ಲಿ ನಡೆದಿದೆ. ಈ ಹಿನ್ನೆಲೆಯಲ್ಲಿ ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉದ್ಯಮಿ ಜಯಶೀಲ ಶೆಟ್ಟಿಯವರ ಸೊಸೆ ಶೀತಲ್ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡವರು. ಈಕೆ ಜಯಶೀಲ ಶೆಟ್ಟಿ ಅವರ ಪುತ್ರ ಮನೀಶ್ ಅವರ ಪತ್ನಿ.
ಶೀತಲ್ ಶೆಟ್ಟಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಈಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಒಂದೂವರೆ ವರ್ಷದ ಹಿಂದಷ್ಟೇ ಈ ದಂಪತಿಗೆ ವಿವಾಹವಾಗಿತ್ತು. ದಂಪತಿಗೆ ಒಂದು ಹೆಣ್ಣು ಮಗುವಿದೆ. ಗಂಡ ಟೂರ್ಗೆ ಕರೆದುಕೊಂಡು ಹೋಗಿಲ್ಲವೆಂದು ಮನನೊಂದು ಈಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಕುಟುಂಬಸ್ಥರು ವಿದೇಶ ಪ್ರವಾಸದಲ್ಲಿದ್ದಾರೆ ಎಂಬ ಮಾಹಿತಿ ಲಭಿಸಿದ್ದು, ಸ್ಥಳಕ್ಕೆ ಘಟಪ್ರಭಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.