ಬಂಟ್ವಾಳ: ಪತಿ ಹಾಗೂ ಆತನ ಮನೆಯವರು ವರದಕ್ಷಿಣೆ ನೀಡುತ್ತಿದ್ದಾರೆಂದು ಮನನೊಂದು ನವವಿವಾಹಿತೆ ತವರು ಮನೆಯಲ್ಲಿಯೇ ನೇಣಿಗೆ ಶರಣಾಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಸಜೀಪ ಮೂಡ ಗ್ರಾಮದ ಸುಭಾಷ್ ನಗರ ನಿವಾಸಿ ನೌಸೀನ್ (22) ಮೃತಪಟ್ಟ ಯುವತಿ.
ನೌಸೀನ್ ಹಾಗೂ ಉಳ್ಳಾಲದ ನಿವಾಸಿ ಆಜ್ಮಾನ್ ಇನ್ ಸ್ಟಾಗ್ರಾಂನಲ್ಲಿ ಪರಿಚಯವಾಗಿ, ಪ್ರೇಮದ ಬಲೆಗೆ ಬಿದ್ದಿದ್ದರು ಇಬ್ಬರಿಗೆ ಮೂರು ತಿಂಗಳ ಹಿಂದಷ್ಟೇ ವಿವಾಹವಾಗಿತ್ತು. ಆದರೆ ಮದುವೆಯ ಬಳಿಕ ಪತಿ ಸೇರಿದಂತೆ ಅತ್ತೆ, ನಾದಿನಿ ಮತ್ತು ಆಕೆಯ ಪತಿ ಸೇರಿಕೊಂಡು ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು. ಆದ್ದರಿಂದ ನೌಸೀನ್ ಉಳ್ಳಾಲದ ಪತಿಯ ಮನೆಯಿಂದ ಸಜೀಪದ ತವರು ಮನೆಗೆ ಬಂದಿದ್ದಳು. ಮಾನಸಿಕವಾಗಿ ನೊಂದಿದ್ದ ನೌಸೀನ್ ಆ.25 ರಂದು ಮನೆಯಲ್ಲಿ ಯಾರು ಇಲ್ಲದ ವೇಳೆ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಸಾವಿನ ಬಗ್ಗೆ ಸೂಕ್ತವಾದ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ನಗರ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.