-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಉಳ್ಳಾಲ: ಪರೀಕ್ಷೆಯಲ್ಲಿ ಕಳಪೆ ಫಲಿತಾಂಶ - ಗಣಿತ ಶಿಕ್ಷಕಿ ನೀರಿನ ಬಾಟಲಿಗೆ ಅವಧಿ ಮೀರಿದ ಮಾತ್ರೆ ಹುಡಿ ಹಾಕಿ ಕುಕೃತ್ಯ ಮೆರೆದ ಬಾಲಕಿಯರು

ಉಳ್ಳಾಲ: ಪರೀಕ್ಷೆಯಲ್ಲಿ ಕಳಪೆ ಫಲಿತಾಂಶ - ಗಣಿತ ಶಿಕ್ಷಕಿ ನೀರಿನ ಬಾಟಲಿಗೆ ಅವಧಿ ಮೀರಿದ ಮಾತ್ರೆ ಹುಡಿ ಹಾಕಿ ಕುಕೃತ್ಯ ಮೆರೆದ ಬಾಲಕಿಯರು

ಉಳ್ಳಾಲ: ಪರೀಕ್ಷೆಯಲ್ಲಿ ಕಳಪೆ ಫಲಿತಾಂಶ ಪಡೆದಿದ್ದ ಆರನೇ ತರಗತಿಯ ವಿದ್ಯಾರ್ಥಿನಿ ತನ್ನ ಸಹಪಾಠಿಯೊಂದಿಗೆ ಸೇರಿ ಶಿಕ್ಷಕಿಯ ನೀರಿನ ಬಾಟಲಿಗೆ ಅವಧಿ ಮುಗಿದಿದ್ದ ಮಾತ್ರೆಗಳನ್ನ ಹಾಕಿ ಸೇಡು ತೀರಿಸಿರುವ ಆತಂಕಕಾರಿ ಘಟನೆ ನಗರದ ಉಳ್ಳಾಲದ ಖಾಸಗಿ ಶಾಲೆಯಲ್ಲಿ ನಡೆದಿದೆ. ಈ ನೀರನ್ನು ಕುಡಿದ ಪರಿಣಾಮ ಇಬ್ಬರು ಶಿಕ್ಷಕಿಯರು ಅಸ್ವಸ್ಥಗೊಂಡಿದ್ದಾರೆ. 

ಶಾಲೆಯಲ್ಲಿ ಯುನಿಟ್ ಟೆಸ್ಟ್ ನ ಗಣಿತ ವಿಷಯದಲ್ಲಿ ಆರನೇ ತರಗತಿ ವಿದ್ಯಾರ್ಥಿನಿಯೊಬ್ಬಳಿಗೆ ಕಡಿಮೆ ಅಂಕ ಬಂದಿದೆ. ಪೇಪರ್ ಕರೆಕ್ಷನ್ ಮಾಡಿರುವ ಗಣಿತ ಶಿಕ್ಷಕಿ ಸರಿಯಿದ್ದ ಉತ್ತರಕ್ಕೂ ತಪ್ಪು ಹಾಕಿದ್ದಾರೆನ್ನುವ ಭಾವನೆ ವಿದ್ಯಾರ್ಥಿನಿಯಲ್ಲಿ ಹುಟ್ಟಿದೆ. ಅದಕ್ಕಾಗಿ ಶಿಕ್ಷಕಿ ವಿರುದ್ಧ ಸೇಡು ತೀರಿಸಲು ವಿದ್ಯಾರ್ಥಿನಿ ತನ್ನ ಸಹಪಾಠಿ ಸಹಾಯ ಪಡೆದುಕೊಂಡು ಸ್ಟಾಫ್ ರೂಮ್ ನಲ್ಲಿ ಯಾರೂ ಇಲ್ಲದ ವೇಳೆ ಅವಧಿ ಮೀರಿದ್ದ ಮಾತ್ರೆಗಳನ್ನು ಗಣಿತ ಶಿಕ್ಷಕಿಯ ನೀರಿನ ಬಾಟಲಿಗೆ ಹಾಕಿದ್ದಾಳೆ. ಇದೇ ನೀರು ಕುಡಿದು ಗಣಿತ ಶಿಕ್ಷಕಿ ಅಸ್ವಸ್ಥಗೊಂಡಿದ್ದಾರೆ. ಅದೇ ನೀರು ಸೇವಿಸಿದ ಮತ್ತೋರ್ವ ಶಿಕ್ಷಕಿಯ ಮುಖ ಊದಿಕೊಂಡಿದೆ. ಅನುಮಾನಗೊಂಡ ಶಿಕ್ಷಕರು ನೀರಿನ ಬಾಟಲಿ ಪರಿಶೀಲಿಸಿದಾಗ ನೀರಿನಲ್ಲಿ ಮಾತ್ರೆಗಳು ಕರಗಿದ್ದು ಪತ್ತೆಯಾಗಿದೆ. ಸಿಸಿಟಿವಿ ಪರಿಶೀಲನೆ ಮಾಡಿದಾಗ ವಿದ್ಯಾರ್ಥಿನಿಯರ ಕುಕೃತ್ಯ ಬೆಳಕಿಗೆ ಬಂದಿದೆ.

ಇದೀಗ ಕುಕೃತ್ಯವೆಸಗಿರುವ ವಿದ್ಯಾರ್ಥಿನಿಯರನ್ನು ಶಾಲಾಡಳಿತವು ಟಿಸಿ ಕೊಟ್ಟು ಡಿಬಾರ್ ಮಾಡಿದೆ.‌ ಆದರೆ ಶಿಕ್ಷಣ ಇಲಾಖೆ ಹಾಗೂ ಪೊಲೀಸ್ ಇಲಾಖೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ವಿಚಾರಣೆ ನಡೆಸಬೇಕೆಂಬ ಒತ್ತಾಯ ಸಾರ್ವಜನಿಕ ವಲಯದಿಂದ ಕೇಳಿಬಂದಿದೆ.

Ads on article

Advertise in articles 1

advertising articles 2

Advertise under the article

ಸುರ