ಮಂಗಳೂರು: ವಿಧಾನಸಭೆ ಟಿಕೆಟ್ ಗಾಗಿ ಚೈತ್ರಾ ಕುಂದಾಪುರ ಡೀಲ್ ಮಾಡಿ ಕೋಟ್ಯಂತರ ವಂಚನೆ ಎಸಗಿರುವ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ ಸಿಸಿಬಿ ಪೊಲೀಸರು ಗುರುಪುರದ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿಗೆ ನೊಟೀಸ್ ನೀಡಿದ್ದಾರೆ.
ಬೆಂಗಳೂರು ಸಿಸಿಬಿ ಸಹಾಯಕ ಪೊಲೀಸ್ ಕಮಿಷನರ್ ರೀನಾ ಸುವರ್ಣ ಈ ನೊಟೀಸ್ ಜಾರಿಗೊಳಿಸಿದ್ದಾರೆ. ಇನ್ನೆರಡು ದಿನಗಳಲ್ಲಿ ಸಿಸಿಬಿ ವಿಚಾರಣೆಗೆ ಹಾಜರಾಗುವಂತೆ ಸ್ವಾಮೀಜಿಗೆ ಸೂಚನೆ ನೀಡಿದ್ದಾರೆ.
ವಂಚನೆ ಪ್ರಕರಣದಲ್ಲಿ ಚೈತ್ರಾ ಮತ್ತು ಗ್ಯಾಂಗ್ ಬೆಂಗಳೂರು ಸಿಸಿಬಿ ಪೊಲೀಸರ ಬಲೆಗೆ ಬಿದ್ದಿತ್ತು. ಬಳಿಕ, ಚೈತ್ರಾ ಐಟಿ ಇಲಾಖೆಗೆ ಬರೆದಿರುವ ಎನ್ನಲಾಗಿರುವ ಪತ್ರವೊಂದು ವೈರಲ್ ಆಗಿತ್ತು. ಪತ್ರದಲ್ಲಿ ವಜ್ರದೇಹಿ ಮಠದ ಸ್ವಾಮೀಜಿಯವರ ಹೆಸರು ಇದ್ದುದರಿಂದ ವಿಷಯ ಚರ್ಚೆಗೆ ಗ್ರಾಸವಾಗಿತ್ತು. ಆ ಬಗ್ಗೆ ಸ್ಪಷ್ಟನೆ ನೀಡಿದ್ದ ಸ್ವಾಮೀಜಿ, ತನಗೂ ಆ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ ಎಂದಿದ್ದರು.