-->
1000938341
ಮಂಗಳೂರು: ಪೊಲೀಸ್ ವಿಶೇಷ ಕಾರ್ಯಾಚರಣೆ 15 ಮಂದಿ ಮಾದಕವ್ಯಸನಿಗಳು ಅರೆಸ್ಟ್

ಮಂಗಳೂರು: ಪೊಲೀಸ್ ವಿಶೇಷ ಕಾರ್ಯಾಚರಣೆ 15 ಮಂದಿ ಮಾದಕವ್ಯಸನಿಗಳು ಅರೆಸ್ಟ್

ಮಂಗಳೂರು: ನಗರದಲ್ಲಿ ಮಾದಕದ್ರವ್ಯ ಜಾಗೃತಿ ಅಭಿಯಾನದ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ 15 ಮಂದಿ ಮಾದಕವ್ಯಸನಿಗಳನ್ನು ಬಂಧಿಸಿದ್ದಾರೆ.

ನ.1 ರಿಂದ ನಾಲ್ಕು ವಿಶೇಷ ತಂಡಗಳನ್ನು ರಚಿಸಿ ಸಂಬಂಧಪಟ್ಟ ಎಸಿಪಿಯವರ ಮೇಲ್ವಿಚಾರಣೆಯಲ್ಲಿ ಮಾದಕದ್ರವ್ಯದ ವಿರುದ್ಧ ಪೊಲೀಸರಿಂದ ಕಾರ್ಯಾಚರಣೆ ನಡೆದಿದೆ. ಈ ತಂಡಗಳು ನಾಲ್ಕು ದಿನಗಳಿಂದ ಹೆಚ್ಚಿನ ಜನಸಂದಣಿ ಇರುವ ಪ್ರದೇಶಗಳು, ನಗರದ ವಿವಿಧೆಡೆಗಳಲ್ಲಿ ಲಾಡ್ಜ್‌ಗಳು, ಪಬ್‌ಗಳು, ಹೊಟೇಲ್‌ಗಳು, ಹೋಂ ಸ್ಟೇಗಳು, ರೆಸಾರ್ಟ್‌ಗಳು ಮತ್ತು ವಿದ್ಯಾರ್ಥಿಗಳು ವಾಸವಾಗಿರುವ ಅಪಾರ್ಟ್‌ಮೆಂಟ್‌ಗಳನ್ನು ಪರಿಶೀಲಿಸಲಾಗಿದೆ. ಈ ವೇಳೆ ನಗರದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿರವರು 56 ಶಂಕಿತ ವ್ಯಕ್ತಿಗಳನ್ನು ಮಾದಕವಸ್ತು ಸೇವನೆಗಾಗಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿರುತ್ತಾರೆ. 

ವೈದ್ಯಕೀಯ ತಪಾಸಣೆಯ ಆಧಾರದ ಮೇಲೆ 27 (ಬಿ) ಎನ್‌ಡಿಪಿಎಸ್ ಕಾಯ್ದೆಯಡಿಯಲ್ಲಿ ಒಟ್ಟು 12 ಮಾದಕವಸ್ತು ಸೇವನೆ ಪ್ರಕರಣಗಳನ್ನು ದಾಖಲಿಸಿ 15 ಮಾದಕವ್ಯಸನಿಗಳನ್ನು ದಸ್ತಗಿರಿ ಮಾಡಿದ್ದಾರೆ. ಇವರಿಂದ 7 ಮೊಬೈಲ್ ಫೋನ್‌ಗಳು ಮತ್ತು 2 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ ವಾಲ್ ರವರ ಮಾರ್ಗದರ್ಶನದಲ್ಲಿ ಕೇಂದ್ರ ಉಪವಿಭಾಗದ ಎಸಿಪಿ ಮಹೇಶ್ ಕುಮಾರ್, ಉತ್ತರ ಉಪವಿಭಾಗದ ಎಸಿಪಿ ಮನೋಜ್ ಕುಮಾರ್ ನಾಯ್ಕ, ದಕ್ಷಿಣ ಉಪವಿಭಾಗದ ಎಸಿಪಿ ಧನ್ಯಾ ನಾಯಕ್, ನಗರ ಅಪರಾಧ ಪತ್ತೆ ದಳದ ಎಸಿಪಿ ಪಿ.ಎ. ಹೆಗ್ಡೆ ಹಾಗೂ ಸಿಬ್ಬಂದಿ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ.

Ads on article

Advertise in articles 1

advertising articles 2

Advertise under the article