-->
ಬಿಜೆಪಿ, ಜೆಡಿಎಸ್ ನಾಯಕರು ಸಂಪರ್ಕದಲ್ಲಿ- ಜ.26 ವರೆಗೆ ಕಾದು ನೋಡಿ: ಸವದಿ

ಬಿಜೆಪಿ, ಜೆಡಿಎಸ್ ನಾಯಕರು ಸಂಪರ್ಕದಲ್ಲಿ- ಜ.26 ವರೆಗೆ ಕಾದು ನೋಡಿ: ಸವದಿ

ಬಾಗಲಕೋಟೆ: ನಗರಕ್ಕೆ ಭಾನುವಾರ ಆಗಮಿಸಿದ್ದ ಹಿರಿಯ ಶಾಸಕ ಲಕ್ಷ್ಮಣ ಸವದಿ ಅವರನ್ನು ಬಿಜೆಪಿ ಮುಖಂಡರು ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ. ಬಿಟಿಡಿಎ ಮಾಜಿ ಸದಸ್ಯ, ಬಿಜೆಪಿ ಮುಖಂಡ ಕುಮಾರ ಯಳ್ಳಿಗುತ್ತಿ ಅವರ ಮನೆಗೆ ಸವದಿ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿಯ ವಿಧಾನ ಪರಿಷತ್‌ ಮಾಜಿ ಸದಸ್ಯ ನಾರಾಯಣಸಾ ಭಾಂಡಗೆ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಅಶೋಕ ಲಿಂಬಾವಳಿ ಕೂಡ ಇದ್ದರು. ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಸವದಿ ಅವರೊಂದಿಗೆ ಬಿಜೆಪಿ ಮುಖಂಡರು ಮಾತುಕತೆ ನಡೆಸಿದ್ದು ಕುತೂಹಲಕ್ಕೆ ಕಾರಣವಾಯಿತು.

ಇದೇ ವೇಳೆ ಪ್ರತಿಕ್ರಿಯಿಸಿದ ಸವದಿ, "ಕಾಂಗ್ರೆಸ್ ಸೇರ್ಪಡೆಗೆ ಹಲವು ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಸಂಪರ್ಕದಲ್ಲಿದ್ದು, ಯಾರು ಬರಲಿದ್ದಾರೆ ಎಂಬುದಕ್ಕೆ ಜ.26ರವರೆಗೆ ಕಾದು ನೋಡಿ,'' ಎಂದು ಹೇಳಿದರು.

 'ಈಗ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವವರು ಶಿವಮೊಗ್ಗ, ಮೈಸೂರಿಗೆ ಸೀಮಿತವಾದವರು. ಅವರ ಪ್ರಭಾವ ಉತ್ತರ ಕರ್ನಾಟಕದಲ್ಲಿ ಇಲ್ಲ. ಅಧ್ಯಕ್ಷರ ನೇಮಕಾತಿಯ ಬಗ್ಗೆ ಬಿಜೆಪಿ ಯಲ್ಲೇ ದೊಡ್ಡ ಪ್ರಮಾಣದ ಅಸಮಾಧಾನವಿದೆ,'' ಎಂದರು.

Ads on article

Advertise in articles 1

advertising articles 2

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100

  

Advertise under the article