ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ತಾಯಿ ಮತ್ತು 9 ತಿಂಗಳ ಮಗು ಸಾವು



ಬೆಂಗಳೂರು: ರಸ್ತೆ ಬದಿ ತುಂಡು ಆಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ತಾಯಿ ಮತ್ತು ಮಗಳು ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರಿನ ವೈಟ್ ಫೀಲ್ಡ್​ನ ಕಾಡುಗೋಡಿಯಲ್ಲಿ ಇಂದು ಬೆಳಗಿನ ಜಾವ ನಡೆದಿದೆ. 

ತಾಯಿ ಸೌಂದರ್ಯ (23) ಹಾಗೂ 9 ತಿಂಗಳ ಹೆಣ್ಣುಮಗು ಮೃತಪಟ್ಟಿದ್ದಾರೆ.

ಪಾದಚಾರಿ ಮಾರ್ಗದಲ್ಲಿ ಬಿದ್ದಿದ್ದ ತಂತಿಯನ್ನು ಇಬ್ಬರೂ ತುಳಿದಿದ್ದು, ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಸುಕಿನ ಜಾವ ಘಟನೆ ನಡೆದಿದ್ದರಿಂದ ತಂತಿ ಕಾಣಿಸಿರಲಿಲ್ಲ. ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಮಿಳುನಾಡಿನಿಂದ ಬೆಂಗಳೂರಿಗೆ ಬಂದಿದ್ದ ಸೌಂದರ್ಯ, ಬೆಳಗಿನ ಜಾವ 6 ಗಂಟೆ ಸುಮಾರಿಗೆ ಮಗುವಿನೊಂದಿಗೆ ತಮ್ಮ ಮನೆಗೆ ತೆರಳುತ್ತಿದ್ದರು. ಫುಟ್‌ಪಾತ್ ಮೇಲೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಕತ್ತಲಿನಲ್ಲಿ ಗಮನಿಸದೇ ತುಳಿದಿದ್ದಾರೆ. ಬೆಸ್ಕಾಂ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗುತ್ತಿದೆ ಎಂದು ವೈಟ್ ಫೀಲ್ಡ್ ವಿಭಾಗದ ಡಿಸಿಪಿ ಡಾ.ಶಿವಕುಮಾರ್ ಗುಣಾರೆ ಮಾಹಿತಿ ನೀಡಿದ್ದಾರೆ
BREAKING NEWS
Loading latest news...
Join our WhatsApp Channel Powered By : Online Pudu