ಮಂಗಳೂರು: ನಗರದ ಬಲ್ಮಠ ಬಳಿಯ ಅಂಬೇಡ್ಕರ್ ವೃತ್ತದಲ್ಲಿ ರವಿವಾರ ಮುಂಜಾನೆ 5.15ರ ವೇಳೆಗೆ ಬಸ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿ ಬಸ್ ಚಾಲಕ ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ನಡೆದಿದೆ.
ನಗರದ ಬಂದರ್ ನಿಂದ ಬರುತ್ತಿದ್ದ ಲಾರಿಯು ಬಂಟ್ಸ್ ಹಾಸ್ಟೆಲ್ ನಿಂದ ಸ್ಟೇಟ್ ಬ್ಯಾಂಕ್ ಕಡೆಗೆ ಸಂಚರಿಸುತ್ತಿದ್ದ ಬಸ್ ಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬಸ್ ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಲ್ಲದೆ ಅಪಘಾತ ನಡೆದ ಸ್ಥಳದಲ್ಲಿದ್ದ ಸ್ಟ್ರೀಟ್ ಲೈಟ್ ಕಂಬ, ಸಿಸಿ ಕ್ಯಾಮರಾದ ಕಂಬಗಳಿಗೆ ಹಾನಿಯಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.