ಮೂಡಿಗೆರೆ: ತರಕಾರಿ ಹೇರಿಕೊಂಡು ಬರುತ್ತಿದ್ದ ಲಾರಿಯೊಂದು ಬೈಕ್ ಗೆ ಢಿಕ್ಕಿಯಾಗಿ ಪುತ್ರ ಸ್ಥಳದಲ್ಲೇ ಮೃತಪಟ್ಟು ತಂದೆ ಗಂಭೀರವಾಗಿ ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ಬಿದರಹಳ್ಳಿ ಪಟ್ಟಣದಲ್ಲಿ ಸೋಮವಾರ ರಾತ್ರಿ ವರದಿಯಾಗಿದೆ.
ಮೂಡಿಗೆರೆ ತಾಲೂಕಿನ ಕೆಂಜಿಗೆ ಸಮೀಪದ ಬಾಳೆಹಳ್ಳಿ ನಿವಾಸಿ ಮಂಜುನಾಥ್ (30) ಮೃತಪಟ್ಟ ಯುವಕ.
ಮಂಜುನಾಥ್ ತಂದೆಯೊಂದಿಗೆ ಬೈಕಿನಲ್ಲಿ ಸಂಚರಿಸುತ್ತಿದ್ದರು. ಈ ವೇಳೆ ತರಕಾರಿ ಲಾರಿ ಢಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮಂಜುನಾಥ್ ಅವರ ತಂದೆಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.