-->

ಆಲಿಗಢ ವಿವಿ ವಿದ್ಯಾರ್ಥಿಗಳಿಂದಲೇ ವಿದ್ವಂಸಕ ಕೃತ್ಯಕ್ಕೆ ಸಂಚು : ಉತ್ತರ ಪ್ರದೇಶದಲ್ಲಿ ಆರು ಮಂದಿ ಐಸಿಸ್ ಶಂಕಿತರ ಅರೆಸ್ಟ್

ಆಲಿಗಢ ವಿವಿ ವಿದ್ಯಾರ್ಥಿಗಳಿಂದಲೇ ವಿದ್ವಂಸಕ ಕೃತ್ಯಕ್ಕೆ ಸಂಚು : ಉತ್ತರ ಪ್ರದೇಶದಲ್ಲಿ ಆರು ಮಂದಿ ಐಸಿಸ್ ಶಂಕಿತರ ಅರೆಸ್ಟ್

ಲಕ್ನೋ: ಇಲ್ಲಿನ ಉತ್ತರಪ್ರದೇಶದ ಭಯೋತ್ಪಾದನಾ ನಿಗ್ರಹ ದಳವು ದಿಢೀರ್ ಕಾರ್ಯಾಚರಣೆ ನಡೆಸಿ ಆರು ಮಂದಿ ಐಸಿಸ್ ಸಂಘಟನೆಯ ಶಂಕಿತ ಕಾರ್ಯಕರ್ತರನ್ನು ಬಂಧಿಸಿದೆ. ಈ ಪೈಕಿ ನಾಲ್ವರನ್ನು ರಕೀಬ್ ಇನಾಮ್, ನಾವೇದ್ ಸಿದ್ದಿಕಿ, ಮೊಹಮ್ಮದ್ ನೋಮನ್ ಮತ್ತು ಮೊಹಮ್ಮದ್ ನಾಜಿಮ್ ಎಂದು ಗುರುತಿಸಲಾಗಿದೆ.

ಬಂಧಿತರು ಆಲಿಗಢ ಮುಸ್ಲಿಂ ವಿವಿಯ ವಿದ್ಯಾರ್ಥಿ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದಾರೆ. ಭಯೋತ್ಪಾದನಾ ನಿಗ್ರಹ ದಳದ ಪ್ರಕಾರ, ಆರೋಪಿಗಳು ದೇಶದಲ್ಲಿ ದೊಡ್ಡಮಟ್ಟದ ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸಿದ್ದರು. ಈ ಆರು ಮಂದಿಯನ್ನು ಬಂಧಿಸುವುದರೊಂದಿಗೆ ಆಲಿಗಢ ವಿವಿಯ ವಿದ್ಯಾರ್ಥಿ ಸಂಘಟನೆ ಉಗ್ರಜಾಲದಲ್ಲಿ ಸಕ್ರಿಯವಾಗಿರುವುದು ಬೆಳಕಿಗೆ ಬಂದಿದೆ. ಮೂಲಗಳ ಪ್ರಕಾರ, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಕೇಂದ್ರೀಯ ಸಂಸ್ಥೆಗಳ ರಾಡಾರ್‌ನಲ್ಲಿದ್ದು ಹಲವು ಸಮಯದ ಕಾರ್ಯಾಚರಣೆ ಬಳಿಕ ಬಂಧನ ಮಾಡಲಾಗಿದೆ.

ಪುಣೆ ಇಸ್ಲಾಮಿಕ್ ಸ್ಟೇಟ್ (ಐಎಸ್‌ಐಎಸ್) ಮಾಡ್ಯೂಲ್ ಪ್ರಕರಣದಲ್ಲಿ ಎನ್‌ಐಎಯಿಂದ ಬಂಧಿತರಾಗಿರುವ ರಿಜ್ವಾನ್ ಮತ್ತು ಶಹನವಾಜ್ ಅವರ ವಿಚಾರಣೆ ವೇಳೆ, ಆಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ದೇಶ ವಿರೋಧಿ ಅಜೆಂಡಾವನ್ನು ಹರಡಲು ತೊಡಗಿದ್ದಾರೆ ಎಂದು ತಿಳಿದುಬಂದಿತ್ತು.

Ads on article

🎁 Amazon Prime ಸದಸ್ಯರಾಗಿರಿ

Amazon Prime Offer
👉 ಉಚಿತ shipping, Prime Video, shopping deals—all in one!

Disclosure: ಈ ಲಿಂಕ್ Amazon Affiliate Program ನ ಭಾಗವಾಗಿದೆ. ನೀವು ಈ ಲಿಂಕ್ ಮೂಲಕ Prime ಸದಸ್ಯರಾಗಿದರೆ, ನಮಗೆ commission ಸಿಗಬಹುದು.

Advertise in articles 1

advertising articles 2

Advertise under the article