ಮಂಗಳೂರು: ಉದ್ಯೋಗಿಗಳ ಮೇಲೆ ನೈತಿಕ ಪೊಲೀಸ್ ಗಿರಿ: ಬಜರಂಗದಳ ಕಾರ್ಯಕರ್ತರಿಬ್ಬರ ಬಂಧನ


ಮಂಗಳೂರು: ಜೊತೆಯಾಗಿ ಕೆಲಸ ಮಾಡುತ್ತಿದ್ದ ಅನ್ಯಕೋಮಿನ ಜೋಡಿ ಸ್ಕೂಟರ್ ನಲ್ಲಿ ಸಂಚರಿಸುತ್ತಿರುವುದನ್ನು ಗಮನಿಸಿ ನಗರದ ಮೋರ್ಗನ್ಸ್ ಗೇಟ್ ಬಳಿಯ ಮಂಕಿ ಸ್ಟಾಂಡ್ ನಲ್ಲಿ ಅನೈತಿಕ ಪೊಲೀಸ್ ಗಿರಿ ನಡೆಸಿದ ಇಬ್ಬರು ಬಜರಂಗದಳ ಕಾರ್ಯಕರ್ತರನ್ನು ಪಾಂಡೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಅಕ್ಷಯ್ ರಾವ್ ಹಾಗೂ ಶಿಬಿನ್ ಪಡಿಕ್ಕಲ್ ಬಂಧಿತ ಬಜರಂಗದಳದ ಕಾರ್ಯಕರ್ತರು.

ಸೋಮವಾರ ರಾತ್ರಿ 8 ಗಂಟೆಯ ವೇಳೆಗೆ ಜೋಡಿಯ ಮೇಲೆ ಮಂಕಿ ಸ್ಟಾಂಡ್ ನಲ್ಲಿ ಅನೈತಿಕ ಪೊಲೀಸ್ ಗಿರಿ ನಡೆಸಿದ ನಡೆದಿದೆ. ಪಾಂಡೇಶ್ವರ ನಿವಾಸಿ ನೂರುಲ್ ಅಮೀನ್ ಮುಳಿಹಿತ್ಲು ಬಳಿ ಸ್ಪೋರ್ಟ್ಸ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಈತ ತನ್ನೊಂದಿಗೆ ಕೆಲಸ ಮಾಡುತ್ತಿದ್ದ ಚಿಕ್ಕಮಗಳೂರಿನ ಹಿಂದೂ ಯುವತಿಯನ್ನು ಸ್ಕೂಟರ್ ನಲ್ಲಿ ಕರೆದೊಯ್ದು ಮೊಬೈಲ್ ರಿಪೇರಿ ಮಾಡಿಸಿ ಮಿಲಾಗ್ರಿಸ್ ಚರ್ಚ್ ಕಡೆಯಿಂದ ಭಗಿನಿ ಸಮಾಜದತ್ತ ಬರುತ್ತಿದ್ದ. ಆಗ ಅಕ್ಷಯ್ ರಾವ್ ಹಾಗೂ ಶಿಬಿನ್ ಪಡಿಕ್ಕಲ್ ಬೈಕ್ ನಲ್ಲಿ ಅವರನ್ನು ಬೆನ್ನಟ್ಟಿ ಮಂಕಿ ಸ್ಟಾಂಡ್ ನಲ್ಲಿ ಸ್ಕೂಟರ್ ಅಡ್ಡ ಹಾಕಿ ಜೋಡಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ವೇಳೆ ಸ್ಥಳದಲ್ಲಿ ಜನ ಜಮಾಯಿಸಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತೆರಳುತಿದ್ದಂತೆ ಮಧ್ಯ ಪ್ರವೇಶಿಸಿದ ಹೊಯ್ಸಳ ವಾಹನದ ಪೊಲೀಸರು ಗುಂಪನ್ನು ಚದುರಿಸಿ, ಜೋಡಿಯನ್ನು ಠಾಣೆಗೆ ಕರೆದೊಯ್ದಿದ್ದಾರೆ. ಬಳಿಕ ತನಿಖೆ ನಡೆಸಿ ಅನೈತಿಕ ಪೊಲೀಸ್ ಗಿರಿ ನಡೆಸಿದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BREAKING NEWS
Loading latest news...
Join our WhatsApp Channel Powered By : Online Pudu