-->
ಮಂಗಳೂರು: ಎಂಡಿಎಂಎ ಮಾರುತ್ತಿದ್ದ ಕೇರಳ ಮೂಲದ ಇಬ್ಬರು ಅರೆಸ್ಟ್

ಮಂಗಳೂರು: ಎಂಡಿಎಂಎ ಮಾರುತ್ತಿದ್ದ ಕೇರಳ ಮೂಲದ ಇಬ್ಬರು ಅರೆಸ್ಟ್


ಮಂಗಳೂರು:ಎಂಡಿಎಂಎ ಮಾರಾಟ ಮಾಡುತ್ತಿದ್ದ ಕೇರಳ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ ಆರೋಪಿಗಳಿಂದ ಒಟ್ಟು 95,000  ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕೇರಳದ ಕಾಸರಗೋಡು ಜಿಲ್ಲೆಯ ಮುಸ್ತಫಾ (37) 
ಶಂಶುದ್ದೀನ್ ಎ (38)  ಬಂಧಿತ ಆರೋಪಿಗಳು.

ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿಯ ಕೆ ಸಿ ರೋಡ್ ನ ರಾಷ್ಟ್ರೀಯ ಹೆದ್ದಾರಿ 66ರ ಬಳಿಯಲ್ಲಿ ಇಬ್ಬರು ನಿಷೇಧಿತ ಮಾದಕದ್ರವ್ಯವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾರು. ಈ ಬಗ್ಗೆ ಖಚಿತ ಮಾಹಿತಿಯ ಮೇರೆಗೆ  ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ 75 ಸಾವಿರ ರೂ. ಮೌಲ್ಯದ 15 ಗ್ರಾಂ ಎಂಡಿಎಂಎ, ಡಿಜಿಟಲ್ ತೂಕ ಮಾಪನ ಹಾಗೂ ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 95,000 ರೂ. ಆಗಬಹುದು ಎಂದು ಅಂದಾಜಿಸಲಾಗಿದೆ.

Ads on article

Advertise in articles 1

advertising articles 2

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100

  

Advertise under the article