ಬ್ರೇಕಿಂಗ್ ನ್ಯೂಸ್

[getTicker results="10" label="recent" type="ticker"]

ಬಿಜೆಪಿ ರಾಜ್ಯಾಧ್ಯಕ್ಷಗಾಗಿ ಬಿ.ವೈ.ವಿಜಯೇಂದ್ರ ನೇಮಕ


ನವದೆಹಲಿ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ಬಿಎಸ್ ವೈ ಪುತ್ರ ಬಿ.ವೈ.ವಿಜಯೇಂದ್ರ ಅವರನ್ನು ನೇಮಕ ಮಾಡಿ ಬಿಜೆಪಿ ರಾಷ್ಟ್ರೀಯಾಧ್ಯಕ್ಷ ಜೆ.ಪಿ.ನಡ್ಡಾ ನಿರ್ದೇಶಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ, ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಶಾಸಕ, ಪಕ್ಷದ ರಾಜ್ಯ ಉಪಾಧ್ಯಕ್ಷರಾಗಿದ್ದ ಬಿ.ವೈ. ವಿಜಯೇಂದ್ರ ಯಡಿಯೂರಪ್ಪ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದ್ದಾರೆ.