-->
1000938341
ಕುಸಾಟ್ ಟೆಕ್ ಫೆಸ್ಟ್ ನಲ್ಲಿ ಕಾಲ್ತುಳಿತಕ್ಕೆ ನಾಲ್ವರು ವಿದ್ಯಾರ್ಥಿಗಳು ಮೃತ್ಯು

ಕುಸಾಟ್ ಟೆಕ್ ಫೆಸ್ಟ್ ನಲ್ಲಿ ಕಾಲ್ತುಳಿತಕ್ಕೆ ನಾಲ್ವರು ವಿದ್ಯಾರ್ಥಿಗಳು ಮೃತ್ಯು


ತಿರುವನಂತಪುರಂ: ಕೇರಳದ ಕೊಚ್ಚಿನ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾನಿಲಯದಲ್ಲಿ (ಕುಸಾಟ್) ಆಯೋಜನೆ ಗೊಂಡಿದ್ದ ಟೆಕ್ ಫೆಸ್ಟ್‌ನಲ್ಲಿ ನೂಕುನುಗ್ಗಲು ಉಂಟಾದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಕಾಲ್ತುಳಿತಕ್ಕೊಗಿ ಮೃತಪಟ್ಟಿದ್ದು, ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಖ್ಯಾತ ಗಾಯಕಿ ನಿಕಿತಾ ಗಾಂಧಿ ಕಾನ್ಸರ್ಟ್​ ವೇಳೆ ಕಾಲ್ತುಳಿತ ಸಂಭವಿಸಿದೆ. ಈ ವೇಳೆ ಮಳೆ ಸುರಿಯಲಾರಂಭಿಸಿದೆ‌. ಪರಿಣಾಮ ಹಲವರು ಆಡಿಟೋರಿಯಂ ಬಳಿ ಓಡಿ ಬಂದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ದುರಂತದಲ್ಲಿ ಇಬ್ಬರು ಗಂಡು ಮತ್ತು ಇಬ್ಬರು ಹೆಣ್ಣು ಮಕ್ಕಳು ಮೃತಪಟ್ಟಿದ್ದಾರೆ. ಮೂವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. 15 ಮಂದಿ ಪ್ರಜ್ಞೆ ಕಳೆದುಕೊಂಡಿದ್ದರು. 40ಕ್ಕೂ ಅಧಿಕ ಮಂದಿಗೆ ಗಾಯಗಳಾಗಿವೆ. ನಾಲ್ವರು ವಿದ್ಯಾರ್ಥಿಗಳ ಮೃತದೇಹಗಳನ್ನು ಕಳಮಶ್ಳೇರಿ ಮೆಡಿಕಲ್ ಕಾಲೇಜಿನಲ್ಲಿ ಇರಿಸಲಾಗಿದೆ.

ಶನಿವಾರ ಟೆಕ್​​ಫೆಸ್ಟ್​ನ ಸಮಾರೋಪ ನಡೆದಿತ್ತು.ಮಳೆ ಆರಂಭವಾಗುತ್ತಿದ್ದಂತೆ ಹೊರಗಿನವರೂ ಸೇರಿದಂತೆ ಹಲವರು ಸಭಾಂಗಣಕ್ಕೆ ನುಗ್ಗಿದರು. ಆಗ ಅವಸರದಲ್ಲಿ ಮೆಟ್ಟಿಲುಗಳಿಂದ ಕೆಳಗೆ ಬಿದ್ದ ವಿದ್ಯಾರ್ಥಿಗಳ ಮೇಲೆ ಇತರರು ತುಳಿದು ಓಡಿದ್ದಾರೆ. ಕ್ಯಾಂಪಸ್‌ನ ಬಯಲು ಸಭಾಂಗಣದಲ್ಲಿ ಈ ದುರಂತ ಸಂಭವಿಸಿದೆ.

Ads on article

Advertise in articles 1

advertising articles 2

Advertise under the article