ಸುಳ್ಯದಲ್ಲಿ ಏಕಾಏಕಿ ಭೂಕುಸಿತ ಬೆಚ್ಚಿಬಿದ್ದ ಜನತೆ


ಸುಳ್ಯ: ನಗರದ ಪರಿವಾರಕಾನ ಉಡುಪಿ ಗಾರ್ಡನ್ ಹೋಟೆಲ್ ಎದುರು ಸುಮಾರು ಹತ್ತು ಅಡಿಯಷ್ಟು ಉದ್ದಕ್ಕೆ ಗುಂಡಿ ನಿರ್ಮಾಣವಾಗಿದೆ. ಏಕಾಏಕಿ ಭೂಮಿ ಕುಸಿತಕ್ಕೆ ಅವೈಜ್ಞಾನಿಕ ಕಾಮಗಾರಿಯೇ ಕಾರಣವೆಂಬ ಶಂಕೆ ವ್ಯಕ್ತವಾಗಿದೆ.

ಸುಳ್ಯದಲ್ಲಿ ಜೋರಾದ ಮಳೆ ಸುರಿದಿದ್ದು, ಈ ಹಿನ್ನೆಲೆಯಲ್ಲಿ ಭೂಕುಸಿತ ಆಗಿದೆ ಎಂಬುವುದಾಗಿ ಕೆಲವರು ಹೇಳುತ್ತಿದ್ದಾರೆ. ಆದರೆ ಇಂಟರ್ ಲಾಕ್ ಅಳವಡಿಸಿರುವ ಭೂಮಿಯಡಿ ನೀರು ರಭಸವಾಗಿ ನುಗ್ಗದಿದ್ದರೂ ಭೂಕುಸಿತ ಹೇಗೆ ಸಂಭವಿಸಿತು ಎನ್ನುವುದು ಎಲ್ಲರ ಪ್ರಶ್ನೆಯಾಗಿದೆ.

ಗುಂಡಿ ಪಕ್ಕದಲ್ಲಿ ಇರುವ ವಿದ್ಯುತ್ ಕಂಬವೂ ಉರುಳಿ ಬಿದ್ದಿದ್ದು ಅದೃಷ್ಟವಶಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ. ಪ್ರತಿ ದಿನವೂ ಹೋಟೆಲ್ ಗೆ ಬರುವ ಕಾರುಗಳು ಅಲ್ಲಿ ಕೂಡ ಪಾರ್ಕಿಂಗ್ ಮಾಡುತ್ತಿದ್ದರು. ಆದರೆ ಇಂದು ಅದೃಷ್ಟವಶಾತ್ ಯಾರೂ ಇರಲಿಲ್ಲ ಎಂದು ತಿಳಿದು ಬಂದಿದೆ.

ಈ ಕುರಿತಂತೆ ನ.ಪಂ ಮುಖ್ಯಾಧಿಕಾರಿ ಜೊತೆ ವಿವರ ಕೇಳಿದ್ದು, ಸ್ಥಳ ಪರಿಶೀಲನೆ ಬಳಿಕ ಮಾಹಿತಿ ನೀಡುವುದಾಗಿ ತಿಳಿಸಿದ್ದಾರೆ. 'ಸುಡಾ' ರೂಪುರೇಷೆಗಳ ಅಡಿಯಲ್ಲಿ ಕಟ್ಟಡ ನಿರ್ಮಾಣವಾಗಿದ್ದರೂ ಇದೀಗ ಕಟ್ಟಡದ ಬಳಿ ಕುಸಿತವಾಗಿರುವುದು ಹಲವರ ಆತಂಕಕ್ಕೆ ಕಾರಣವಾಗಿದೆ.
BREAKING NEWS
Loading latest news...
Join our WhatsApp Channel Powered By : Online Pudu