ಉಡುಪಿ: ತಾಯಿ - ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

ಉಡುಪಿ: ತಾಯಿ ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಆತಂಕಕಾರಿ ಘಟನೆ ಮಲ್ಪೆ ಠಾಣಾ ವ್ಯಾಪ್ತಿಯ ನೇಜಾರು ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಮತ್ತೋರ್ವನು ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ನೇಜಾರು ನಿವಾಸಿ ಹಸೀನಾ ಹಾಯ ಅವರ ಮಕ್ಕಳಾದ ಅಫ್ಘಾನ್(23), ಅಯ್ತಾಝ್ (21) ಮತ್ತು ಅಸೀಮ್(14) ಕೊಲೆಯಾದ ದುರ್ದೈವಿಗಳು. ಮತ್ತೋರ್ವನು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪರಿಚಿತ ವ್ಯಕ್ತಿಯೊಬ್ಬ ಬಿಳಿ ಬಣ್ಣದ ಅಂಗಿ ಹಾಗೂ ಬಿಳಿ ಬಣ್ಣದ ಮಾಸ್ಕ್ ಧರಿಸಿ ಈ ಕೃತ್ಯ ಎಸಗಿರುವ ಮಾಹಿತಿ ಲಭ್ಯವಾಗಿದೆ. ಈ ಅನುಮಾಸ್ಪದ ವ್ಯಕ್ತಿ ಬೋಳು ತಲೆಯವನಾಗಿದ್ದಾನೆ ಎಂದು ಪೊಲೀಸ ಮೂಲಗಳಿಂದ ತಿಳಿದು ಬಂದಿದೆ.

ಸ್ಥಳಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಅರುಣ್ ಕೆ., ಡಿವೈಎಸ್ಪಿ ಆಗಮಿಸಿದ್ದು, ತನಿಖೆ ಕೈಗೆತ್ತಿಕೊಂಡಿದ್ದಾರೆ.
BREAKING NEWS
Loading latest news...
Join our WhatsApp Channel Powered By : Online Pudu