-->
ಮಂಗಳೂರು: ಕೊಲೆ ಯತ್ನ ಪ್ರಕರಣದ ಐವರು ಆರೋಪಿಗಳಿಗೆ ಜೈಲು ಶಿಕ್ಷೆ

ಮಂಗಳೂರು: ಕೊಲೆ ಯತ್ನ ಪ್ರಕರಣದ ಐವರು ಆರೋಪಿಗಳಿಗೆ ಜೈಲು ಶಿಕ್ಷೆ

ಮಂಗಳೂರು: ಇಬ್ಬರನ್ನು ಕೊಲೆಗೆ ಯತ್ನಿಸಿರುವುದು ಮಂಗಳೂರು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸಾಬೀತಾಗಿರುವ ಹಿನ್ನೆಲೆಯಲ್ಲಿ ಐವರು ಆರೋಪಿಗಳಿಗೆ ನ್ಯಾಯಾಧೀಶ ಮಲ್ಲಿಕಾರ್ಜುನ ಸ್ವಾಮಿ ಎಚ್.ಎಸ್. ಅವರು ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

ಮುಲ್ಕಿ ನಿವಾಸಿಗಳಾದ ವಿಕ್ಕಿ ಪೂಜಾರಿ (32), ಆತನ ಸಹೋದರ ಶಶಿ ಪೂಜಾರಿ (30), ವಾಮಂಜೂರು ಪೆರ್ಮಂಕಿಯ ಧನರಾಜ್ ಪೂಜಾರಿ (31), ಬೋಳೂರಿನ ಮೋಕ್ಷಿತ್ ಸಾಲ್ಯಾನ್ (28) ಮತ್ತು ರಾಜೇಶ್ (30) ಶಿಕ್ಷೆಗೊಳಗಾದ ಆರೋಪಿಗಳು. ಪ್ರಕರಣದ ಮತ್ತೋರ್ವ ಆರೋಪಿ ಗಣೇಶ್ (28) ತಲೆಮರೆಸಿಕೊಂಡಿದ್ದಾನೆ.

2015ರ ಜು. 27ರಂದು ಸಂಜೆ 6:30ಕ್ಕೆ ಕುದ್ರೋಳಿಯ ಅಳಕೆ ಮಾರ್ಕೆಟ್ ಮುಂಭಾಗ ಲತೀಶ್ ನಾಯಕ್ ಹಾಗೂ ಇಂದ್ರಜಿತ್‌ ಎಂಬಿಬ್ಬರ ಕೊಲೆಯತ್ನ ನಡೆದಿತ್ತು. ಈ ಬಗ್ಗೆ ತನಿಖೆ ನಡೆಸಿ ಅಂದಿನ ಪೊಲೀಸ್ ಅಧಿಕಾರಿಗಳಾದ ಟಿ.ಡಿ. ನಾಗರಾಜ್ ಮತ್ತು ಭಜಂತ್ರಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಪ್ರಕರಣವನ್ನು ಕೈಗೆತ್ತಿಕೊಂಡ ನ್ಯಾಯಾಲಯ ವಾದವಿವಾದಗಳನ್ನು ಆಲಿಸಿ ಆರೋಪಿಗಳು ತಪ್ಪಿತಸ್ಥರೆಂದು ಘೋಷಿಸಿದೆ. ಆರೋಪಿಗಳಿಗೆ ಐಪಿಸಿ ಸೆಕ್ಷನ್ 143ರಡಿ 3 ತಿಂಗಳ ಸಾದಾ ಸಜೆ, 1,000 ರೂ. ದಂಡ, ದಂಡ ಪಾವತಿಸಲು ತಪ್ಪಿದರೆ ಮತ್ತೆ 15 ದಿನ ಹೆಚ್ಚುವರಿ ಸಾದಾ ಸಜೆ, ಸೆಕ್ಷನ್ 149ರಡಿ 2 ವರ್ಷ ಸಾದಾ ಸಜೆ, 1,000 ರೂ. ದಂಡ, ದಂಡ ಪಾವತಿಸಲು ತಪ್ಪಿದರೆ 3 ತಿಂಗಳು ಸಾದಾ ಸಜೆ, ಸೆಕ್ಷನ್ 307ರಡಿ ಲತೇಶ್ ಕೊಲೆಯತ್ನಕ್ಕೆ 4 ವರ್ಷ ಶಿಕ್ಷೆ, 5,000 ರೂ. ದಂಡ, ದಂಡ ಪಾವತಿಸಲು ತಪ್ಪಿದರೆ 3 ತಿಂಗಳು ಹೆಚ್ಚುವರಿ ಸಾದಾ ಸಜೆ, ಇಂದ್ರಜಿತ್ ಕೊಲೆಯತ್ನಕ್ಕೆ 4 ವರ್ಷ ಶಿಕ್ಷೆ, 2,500 ರೂ. ದಂಡ, ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ 3 ತಿಂಗಳ ಸಾದಾ ಸಜೆ ವಿಧಿಸಿ ತೀರ್ಪು ನೀಡಿದ್ದಾರೆ.

ದಂಡದ ಮೊತ್ತ 1.60 ಲಕ್ಷ ರೂ.ವನ್ನು ಇಂದ್ರಜಿತ್‌ನ ತಾಯಿಗೆ ನೀಡಬೇಕು. ಅಲ್ಲದೆ ಕಾನೂನು ಸೇವಾ ಪ್ರಾಧಿಕಾರ ದಿಂದಲೂ ಇಂದ್ರಜಿತ್ ತಾಯಿಗೆ ಪರಿಹಾರ ನೀಡಬೇಕು ಎಂದು ನ್ಯಾಯಾಧೀಶರು ಆದೇಶದಲ್ಲಿ ತಿಳಿಸಿದ್ದಾರೆ. ಪ್ರಾಸಿಕ್ಯೂಷನ್ ಪರವಾಗಿ ಸರಕಾರಿ ಅಭಿಯೋಜಕಿ ಜುಡಿತ್ ಓ‌.ಎಂ. ಕ್ರಾಸ್ತಾ ವಾದಿಸಿದ್ದರು.

Ads on article

Advertise in articles 1

advertising articles 2

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100

  

Advertise under the article