-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ವಿಶ್ವಕಪ್​ ಟೂರ್ನಿಯಲ್ಲಿ ನ್ಯೂಜಿಲೆಂಡ್​ ಪರ ಅಮೋಘ ಪ್ರದರ್ಶನ ನೀಡಿದ ಕನ್ನಡಿಗ ರಚಿನ್ ರವೀಂದ್ರರ ದೃಷ್ಟಿ ತೆಗೆದ ಅಜ್ಜಿ

ವಿಶ್ವಕಪ್​ ಟೂರ್ನಿಯಲ್ಲಿ ನ್ಯೂಜಿಲೆಂಡ್​ ಪರ ಅಮೋಘ ಪ್ರದರ್ಶನ ನೀಡಿದ ಕನ್ನಡಿಗ ರಚಿನ್ ರವೀಂದ್ರರ ದೃಷ್ಟಿ ತೆಗೆದ ಅಜ್ಜಿ


ಬೆಂಗಳೂರು: ಐಸಿಸಿ ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ನ್ಯೂಜಿಲೆಂಡ್​ ತಂಡದ ಪರ ಅಮೋಘ ಪ್ರದರ್ಶನ ನೀಡಿ ಭರವಸೆ ಮೂಡಿಸಿರುವ ಆಟಗಾರ ಎಂದರೆ ಮೊದಲಿಗೆ ಕೇಳಿ ಬರುವ ಹೆಸರು ಕನ್ನಡಿಗ ರಚಿನ್​ ರವೀಂದ್ರ ಅವರದ್ದು ಎಂಬುದು ಹೆಮ್ಮೆಯ ವಿಚಾರ.

ಇತ್ತೀಚಿಗೆ ರಚಿನ್​ ರವೀಂದ್ರ ಬೆಂಗಳೂರಿನಲ್ಲಿರುವ ತಮ್ಮ ಅಜ್ಜಿ ಮನೆಗೆ ಭೇಟಿ ನೀಡಿದ್ದರು. ಮೊಮ್ಮಗ ಮನೆಗೆ ಭೇಟಿ ನೀಡಿದ ಖುಷಿಗೆ ರಚಿನ್ ರವೀಂದ್ರರ ಅಜ್ಜಿ ದೃಷ್ಟಿ ತೆಗೆದ ಫೋಟೋ ಹಾಗೂ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದವು.

ತಮ್ಮ ಅಜ್ಜಿ ಮನೆಗೆ ಭೇಟಿ ನೀಡಿರುವ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ರಚಿನ್​ ಹೀಗೆಂದು ಬರೆದಿದ್ದಾರೆ. ಇಂತಹ ಅದ್ಭುತ ಕುಟುಂಬವನ್ನು ಪಡೆಯಲು ನಾನು ಅದೃಷ್ಟ ಮಾಡಿದ್ದೇನೆ. ಅಜ್ಜಿಯರು ದೇವತೆಗಳಾಗಿದ್ದು, ಅವರ ನೆನಪುಗಳು ಮತ್ತು ಆಶೀರ್ವಾದಗಳು ನಮ್ಮೊಂದಿಗೆ ಶಾಶ್ವತವಾಗಿ ಉಳಿಯುತ್ತವೆ. ಜೈ ಶ್ರೀರಾಮ್​ ಎಂದು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಬಾರಿಯ ವಿಶ್ವಕಪ್​ ಆವೃತ್ತಿಯಲ್ಲಿ ದಾಖಲೆಯ ಮೇಲೆ ದಾಖಲೆ ಬರೆಯುತ್ತಿರುವ ರಚಿನ್​ ರವೀಂದ್ರ ಕುಟುಂಬಸ್ಥರು ಈಗಲೂ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ರಚಿನ್ ಅವರು ಬೆಂಗಳೂರು ಮೂಲದ ರವೀಂದ್ರ ಕೃಷ್ಣಮೂರ್ತಿ ಹಾಗೂ​ ​ದೀಪಾ ಕೃಷ್ಣಮೂರ್ತಿ ಅವರ ಪುತ್ರ. ಸಾಫ್ಟ್‌ವೇರ್ ಸಿಸ್ಟಮ್ ಆರ್ಕಿಟೆಕ್ಟ್ ಆಗಿರುವ ರವೀಂದ್ರ ಕೃಷ್ಣಮೂರ್ತಿ 1990ರಲ್ಲಿಯೇ ನ್ಯೂಜಿಲೆಂಡ್​​ಗೆ ತೆರಳಿದ್ದರು ಬಳಿಕ ಅಲ್ಲಿಯೇ ನೆಲೆಸಿದ್ದರು.

ಸದ್ಯ ಏಕದಿನ ವಿಶ್ವಕಪ್​ ಅಭಿಯಾನದಲ್ಲಿ ನ್ಯೂಜಿಲೆಂಡ್ ಪರ 9 ಪಂದ್ಯಗಳನ್ನು ಆಡಿರುವ ರಚಿನ್​ 70.62ರ ಸರಾಸರಿಯಲ್ಲಿ 565ರನ್​ಗಳಿಸುವ ಮೂಲಕ ಅತಿ ಹೆಚ್ಚು ರನ್​ ಗಳಿಸಿದವರ ಪೈಕಿ ಎರಡನೇ ಸ್ಥಾನದಲ್ಲಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ