-->
ಮಂಗಳೂರು: ಬಿಜೈ ರಾಜಾ ಹತ್ಯೆ ಪ್ರಕರಣದಲ್ಲಿ ರವಿ ಪೂಜಾರಿ ಖುಲಾಸೆ

ಮಂಗಳೂರು: ಬಿಜೈ ರಾಜಾ ಹತ್ಯೆ ಪ್ರಕರಣದಲ್ಲಿ ರವಿ ಪೂಜಾರಿ ಖುಲಾಸೆ

ಮಂಗಳೂರು: ಬಿಜೈ ರಾಜಾ ಹತ್ಯೆ ಪ್ರಕರಣದಲ್ಲಿ ಭೂಗತ ಪಾತಕಿ ರವಿ ಪೂಜಾರಿಯನ್ನು ಖುಲಾಸೆಗೊಳಿಸಿ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. 

2012ರಲ್ಲಿ ಫಳೀ‌ರ್ ವೆಸ್ಟ್‌ ಗೇಟ್ ಟವರ್ಸ್ ಕಟ್ಟಡದ ನ್ಯಾಷನಲ್ ಮೆಡಿಕಲ್ ಬಳಿ ಬಿಜೈ ರಾಜನನ್ನು ಮಾರಕಾಯುಧದಿಂದ ಕಡಿದು ಕೊಲೆ ಮಾಡಲಾಗಿತ್ತು. ಘಟನೆಗೆ ಸಂಬಂಧಿಸಿದಂತೆ ರವಿ ಪೂಜಾರಿ ಹಾಗೂ ಆತನ ಸಹಚರರ ವಿರುದ್ಧ ಮಂಗಳೂರಿನ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ರವಿ ಪೂಜಾರಿ ಹಾಗೂ ಆತನ ಸಹಚರರ ವಿರುದ್ಧ ದೋಷಾರೋಪ ಪಟ್ಟಿಸಲ್ಲಿಸಿದ್ದರು. 

ಘಟನೆಯ ಬಳಿಕ ರವಿ ಪೂಜಾರಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ. 2021ರಲ್ಲಿ ಆತನನ್ನು ಸೆನೆಗಲ್‌ನಲ್ಲಿ ಬಂಧಿಸಿ, ಭಾರತಕ್ಕೆ ಕರೆತರಲಾಗಿತ್ತು. ಆತನ ವಿರುದ್ಧ ದಾಖಲಾದ ಎಲ್ಲಾ ಪ್ರಕರಣಗಳಲ್ಲಿ ಪೊಲೀಸರು ಹೆಚ್ಚುವರಿ ತನಿಖೆ ನಡೆಸಿ ಹೆಚ್ಚುವರಿ ದೋಷಾರೋಪ ಪಟ್ಟಿಸಲ್ಲಿಸಿದ್ದರು.

ರವಿ ಪೂಜಾರಿ ವಿರುದ್ಧ ದಾಖಲಾದ ಎರಡು ಪ್ರಕರಣಗಳಲ್ಲಿ ಪ್ರಿನ್ಸಿಪಾಲ್ ಸೀನಿಯರ್ ಸಿವಿಲ್ ಜಡ್ಜ್ ಹಾಗೂ ಒಂದು ಪ್ರಕರಣದಲ್ಲಿ ಜೆಎಂಎಫ್‌ಸಿ ನ್ಯಾಯಾಲಯ ಸೇರಿ ಒಟ್ಟು 4 ಪ್ರಕರಣಗಳಲ್ಲಿ ರವಿ ಪೂಜಾರಿಯನ್ನು ಖುಲಾಸೆಗೊಳಿಸಿ ತೀರ್ಪು ನೀಡಲಾಗಿದೆ. ಬಿಜೈ ರಾಜ ಕೊಲೆ ಪ್ರಕರಣಗಳಲ್ಲಿ ವಿಚಾರಣೆ ನಡೆಸಿದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಲ್ಲಿಕಾರ್ಜುನ ಸ್ವಾಮಿ ರವಿ ಪೂಜಾರಿಯನ್ನು ಖುಲಾಸೆಗೊಳಿಸಿ ತೀರ್ಪು ನೀಡಿದ್ದಾರೆ. ಆತನ ವಿರುದ್ಧ ಹಲವು ಪ್ರಕರಣ ಮಂಗಳೂರು ಹಾಗೂ ಬೆಂಗಳೂರಿನಲ್ಲಿ ತನಿಖೆಗೆ ಬಾಕಿಯಿದೆ. ರವಿ ಪೂಜಾರಿ ಪರವಾಗಿ ಮಂಗಳೂರಿನ ವಕೀಲರಾದ ಬಿ.ಅರುಣ್ ಬಂಗೇರ ಮತ್ತು ರಿಹಾನಾ ಪರ್ವೀನ್ ವಾದಿಸಿದ್ದರು.

Ads on article

Advertise in articles 1

advertising articles 2

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100

  

Advertise under the article