ಮಂಗಳೂರು: ಹಾಸ್ಟೆಲ್ ಆರನೇ ಮಹಡಿಯಿಂದ ಹಾರಿ ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ


ಮಂಗಳೂರು: ಎಂಬಿಬಿಎಸ್ ವಿದ್ಯಾರ್ಥಿನಿಯೊಬ್ಬಳು ತಾನಿದ್ದ ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಖಾಸಗಿ ಮೆಡಿಕಲ್ ಕಾಲೇಜು ಆವರಣದಲ್ಲಿ ನಡೆದಿದೆ.

ಮೊದಲ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದ‌ ಬೆಳಗಾವಿ ಜಿಲ್ಲೆಯ ಅಥಣಿಯ ಪ್ರಕೃತಿ ಶೆಟ್ಟಿ(20) ಮೃತಪಟ್ಟ ವಿದ್ಯಾರ್ಥಿನಿ.

ನಸುಕಿನ ವೇಳೆ ಮೂರು ಗಂಟೆ ಸುಮಾರಿಗೆ ಪ್ರಕೃತಿ ಶೆಟ್ಟಿ ಕಾಲೇಜಿನ ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ತಾನು ದಪ್ಪಗಿದ್ದೇನೆ ಎಂದು ಮಾನಸಿಕ ಖಿನ್ನತೆಗೊಳಗಾಗಿ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.

BREAKING NEWS
Loading latest news...
Join our WhatsApp Channel Powered By : Online Pudu