-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಬಡವರ ಮೇಲೆ ದೌರ್ಜನ್ಯ - ಮನನೊಂದು ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣು

ಬಡವರ ಮೇಲೆ ದೌರ್ಜನ್ಯ - ಮನನೊಂದು ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣು



ತುಮಕೂರು: ಒಂದೇ ಕುಟುಂಬದ ಐದು ಮಂದಿ ಮನೆಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರವಿವಾರ ಸಂಜೆ ನಡೆದಿದೆ.

ಶಿರಾ ತಾಲೂಕು ಚಿಕ್ಕನಹಳ್ಳಿಯ ನಿವಾಸಿಗಳಾದ ಗರೀಬ್‌ ಸಾಬ್‌ (32), ಸುಮಯ್ಯಾ (30), ಹಜೀರಾ, ಮಹಮ್ಮದ್‌ ಶುಭಾನ್‌, ಮಹಮ್ಮದ್‌ ಮುನೀರ್‌ ಮೃತಪಟ್ಟವರು. ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಕುಟುಂಬ ತುಮಕೂರಿನ ಸದಾಶಿವನಗರದಲ್ಲಿ ವಾಸವಿದ್ದರು.

ಜೀವನ ನಿರ್ವಹಣೆಗೆ ಗರೀಬ್ ಸಾಬ್ ಕಬಾಬ್‌ ಅಂಗಡಿ ನಡೆಸುತ್ತಿದ್ದರು. ಅಕ್ಕಪಕ್ಕದ ಮನೆಯವರು ಪ್ರತಿನಿತ್ಯ ಕಿರುಕುಳ ನೀಡುತ್ತಿದ್ದರಿಂದ ಬೇಸತ್ತು ಕುಟುಂಬದ ಐದೂ ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಂಬಂಧಿಕರು ದೂರಿದ್ದಾರೆ. ಇವರಿದ್ದ ಮನೆಯ ಕೆಳಗಡೆ ಬಾಡಿಗೆಗೆ ಇದ್ದ ಕಲಂದರ್‌ ಎಂಬುವರು ಮಾನಸಿಕ ಹಿಂಸೆ ನೀಡುತ್ತಿದ್ದರು. ಅವರೇ ತಮ್ಮ ಸಾವಿಗೆ ಕಾರಣ ಎಂದು ವಿಡಿಯೋ ಚಿತ್ರೀಕರಣ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೆ ಕಾರಣರಾದವರಿಗೆ ಕಠಿಣ ಶಿಕ್ಷೆ ನೀಡಬೇಕು. ನಾವು ಯಾರ ತಂಟೆಗೂ ಹೋಗುತ್ತಿರಲಿಲ್ಲ. ಅಕ್ಕಪಕ್ಕದ ಮನೆಯವರು ದೌರ್ಜನ್ಯ ನೀಡುತ್ತಿದ್ದರು. ಬಡವರ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆ. ನಮ್ಮ ಮೃತದೇಹದ ಪರೀಕ್ಷೆ ನಡೆಸಬೇಡಿ ಎಂದು ವಿಡಿಯೋದಲ್ಲಿ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಮೃತ ಗರೀಬ್ ಸಾಬ್ ತನ್ನ ದೊಡ್ಡಮ್ಮನಿಗೆ ಡೆತ್​ನೋಟ್​ ಬರೆದು ನೋವು ತೋಡಿಕೊಂಡಿದ್ದಾರೆ. ದೊಡ್ಡಮ್ಮನಿಗೆ ನಮಸ್ಕಾರ. ನಮಗೆ ಸಾಲ ಹೆಚ್ಚಾಗಿದ್ದು, ವ್ಯಾಪಾರದಲ್ಲಿ ಲಾಭವಿಲ್ಲ. ಕೆಲಸಕ್ಕೆ ಹೋದರೆ ಹಣ ಬರ್ತಿಲ್ಲ. ಆದ್ದರಿಂದ ಸಂಸಾರ ಮಾಡೋದು ಕಷ್ಟವಾಗಿದೆ.‌ ನಮಗೆ ಪ್ರತಿನಿತ್ಯ ಊಟ ಮಾಡುವುದಕ್ಕೂ ಕಷ್ಟವಾಗಿದೆ. ಊರಿನಲ್ಲಿದ್ದಾಗ ಪತ್ನಿಯ ಅಣ್ಣ ಸಾದಿಕ್ ಹಾಗೂ ತಂಗಿ ಯಾಸಿನ್ ತಮ್ಮ ಮೇಲೆ ವಿಷ ಕಾರಿದರೆಂದು ನಾವು ಇಲ್ಲಿಗೆ ಬಂದೆವು. ಇಲ್ಲಿ ಸಾಲಕ್ಕೆ ಹಣ ಕಟ್ಟುವುದೇ ಆಗಿದೆ. ಬಾಡಿಗೆ ಮನೆಗೆ ನಲವತ್ತೈದು ಸಾವಿರ ಅಡ್ವಾನ್ಸ್ ಕೊಟ್ಟಿದ್ದೇವೆ. ಮೂರು ತಿಂಗಳ ಬಾಡಿಗೆ ಕೊಡೋದು ಬಾಕಿಯಿದೆ. ಉಳಿದ ಹಣವನ್ನು ನಮ್ಮ ದೊಡ್ಡಮ್ಮನಿಗೆ ವಾಪಾಸ್ ಕೊಡಿ.

ಮನೆ ವಸ್ತುಗಳನ್ನು ನೀವು ತಗೋಳಿ. ಹದಿನೈದು ಸಾವಿರ ರೂಪಾಯಿಯನ್ನು ಜರಿನಾ ಆಂಟಿಗೆ ಕೊಡಿ. ನಮ್ಮ ಬೈಕ್​ನ ನಮ್ಮ ಹಿರಿಯಣ್ಣ ಅಜಾಜ್​ಗೆ ಕೊಡಿ. ಅತ್ತಿಗೆ ಪರ್ವೀನ್ ಮತ್ತು ಅಣ್ಣನಿಗೆ ಫೋನ್ ಕೊಡಿ. ದೊಡ್ಡಮ್ಮ ನೀವು ಬೇಕಾದ ವಸ್ತುಗಳನ್ನು ಇಟ್ಟುಕೊಳ್ಳಬಹುದು ಅಥವಾ ಮಾರಿಕೊಳ್ಳಬಹುದು. ತುಂಬಾ ವಿಷಯ ಇದೆ, ಆದರೆ ಇದ್ರಲ್ಲಿ ಬರೆಯೋಕಾಗಲ್ಲ. ಈ ಪತ್ರವನ್ನ ಪೊಲೀಸರಿಗೆ ತೋರಿಸಿ. 

ಸದಾಶಿವನಗರದಲ್ಲಿ, ನಾವು ವಾಸಿಸುವ ಮನೆಯ ಕೆಳಗಡೆ ಮನೆಯವರು ನಮಗೆ ತುಂಬಾ ಕಾಟ ಕೊಟ್ಟಿದ್ದಾರೆ. ನಮಗೆ ಯಾರಾದ್ರೂ ಸಹಾಯ ಮಾಡಿದ್ರೆ ಅವರಿಗೆ ಇಲ್ಲಸಲ್ಲದನ್ನ ಹೇಳ್ತಿದ್ರು. ನಾವು ಅವರು ಹೇಳಿದಂತೆ ಕೇಳಬೇಕಿತ್ತು.  ಇಲ್ಲವಾದರೆ ನಮ್ಮೊಂದೊಗೆ ಜಗಳ ಮಾಡ್ತಿದ್ರು. ಶಬಾನಾ ನಮಗೆ ಏಳು ತಿಂಗಳ ಹಣ ಕೊಟ್ಟಿರಲಿಲ್ಲ. ಹಣ ಕೇಳಿದ್ದಕ್ಕೆ ನಮ್ಮ ಮೇಲೆ ವಿಷ ಕಾರುತ್ತಿದ್ದಳು. ನಮ್ಮ ಸಾವಿಗೆ ನಮ್ಮ ಮನೆಯ ಕೆಳಗಿನ ಕಲಂದರ್, ಅವನ ಪುತ್ರಿ ಸಾನಿಯಾ, ಅವನ ಹಿರಿಯ ಮಗ, ಮಹಡಿ ಮನೆಯ ಶಬಾನಾ ಮತ್ತು ಅವಳ ಪುತ್ರಿ ಸಾನಿಯಾ ಎಲ್ಲರೂ ಕಾರಣ. ನಮ್ಮ ಸಾವಿಗೆ ಕಾರಣರಾದವರಿಗೆ ಗೃಹಮಂತ್ರಿಯವರು ಕಾನೂನು ರೀತಿ ಶಿಕ್ಷೆ ಕೊಡಬೇಕು ಎಂದು ಬೇಡಿಕೊಳ್ತೀನಿ. ಇವರ ಕಾಟಕ್ಕೆ ನಮ್ಮ ಪ್ರಾಣ ಕೊಟ್ಟಿದ್ದೇವೆ. ಎಲ್ಲ ಪೊಲೀಸ್ ಅಧಿಕಾರಿಗಳಿಗೆ ಕೈ ಮುಗಿದು ಕೇಳ್ಕೊತ್ತೀವಿ, ನಮ್ಮ ದೇಹವನ್ನು ಪೋಸ್ಟ್ ಮಾರ್ಟಮ್ ಮಾಡಬೇಡಿ. ಇನ್ನೂ ಹಲವು ವಿಷಯಗಳು ಫೋನ್​ನಲ್ಲಿವೆ. ಇಂತಿ ನಿಮ್ಮ ಗರೀಬ್ ಸಾಬ್, ಸುಮಯ್ಯ, ಹಾಜಿರಾ, ಮೊಹಮ್ಮದ್ ಸುಭಾನ್, ಮೊಹಮ್ಮದ್ ಮುನೀರ್ ಎಂದು ಡೆತ್​ನೋಟ್​ನಲ್ಲಿ ಉಲ್ಲೇಖಿಸಲಾಗಿದೆ.

Ads on article

🎁 Amazon Prime ಸದಸ್ಯರಾಗಿರಿ

Amazon Prime Offer
👉 ಉಚಿತ shipping, Prime Video, shopping deals—all in one!

Disclosure: ಈ ಲಿಂಕ್ Amazon Affiliate Program ನ ಭಾಗವಾಗಿದೆ. ನೀವು ಈ ಲಿಂಕ್ ಮೂಲಕ Prime ಸದಸ್ಯರಾಗಿದರೆ, ನಮಗೆ commission ಸಿಗಬಹುದು.

Advertise in articles 1

advertising articles 2

Advertise under the article