-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳೂರು: ಸ್ಪೀಕರ್ ಸ್ಥಾನಕ್ಕೆ ಧರ್ಮದ ಬಣ್ಣ ಹಚ್ಚಿ  ಅಧಿವೇಶನದಲ್ಲಿ ಹೇಗೆ ಭಾಗವಹಿಸುತ್ತಾರೆ ನೋಡುತ್ತೇವೆ - ಜಮೀರ್ ಅಹ್ಮದ್ ಗೆ ವಿಜಯೇಂದ್ರ ಸವಾಲು

ಮಂಗಳೂರು: ಸ್ಪೀಕರ್ ಸ್ಥಾನಕ್ಕೆ ಧರ್ಮದ ಬಣ್ಣ ಹಚ್ಚಿ ಅಧಿವೇಶನದಲ್ಲಿ ಹೇಗೆ ಭಾಗವಹಿಸುತ್ತಾರೆ ನೋಡುತ್ತೇವೆ - ಜಮೀರ್ ಅಹ್ಮದ್ ಗೆ ವಿಜಯೇಂದ್ರ ಸವಾಲು


ಮಂಗಳೂರು: ಸ್ಪೀಕರ್ ಸ್ಥಾನಕ್ಕೆ ಜಾತಿ ಧರ್ಮದ ಬಣ್ಣ ಹಚ್ಚಿ ತಲೆತಗ್ಗಿಸುವ ಕೆಲಸ ಮಾಡಿರುವ ಜಮೀರ್ ಅಹಮದ್ ರಿಂದ ಇಷ್ಟು ಹೊತ್ತಿಗೆ ಸಿಎಂ ರಾಜಿನಾಮೆ ತೆಗೆದುಕೊಳ್ಳಬೇಕಿತ್ತು. ಮುಂದಿನ ಅಧಿವೇಶನದಲ್ಲಿ ಅವರು ಹೇಗೆ ಭಾಗವಹಿಸುತ್ತಾರೆ ನೋಡುತ್ತೇವೆ. ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡು ಹೋರಾಟ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ‌.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಜನರಿಗೆ ಭರವಸೆಗಳನ್ನು ನೀಡಿ ಕಣ್ಣಿಗೆ ಮಣ್ಣೆರಚಿ ಬಹುಮತ ಪಡೆದಿದೆ. ಸದ್ಯ ರಾಜ್ಯದಲ್ಲಿ ಭೀಕರ ಬರಗಾಲವಿದೆ. ಆದರೆ ಅದನ್ನು ನಿಭಾಯಿಸಲು ಸರ್ಕಾರ ವಿಫಲವಾಗಿದೆ. ಉಸ್ತುವಾರಿ ಸಚಿವರು ಜಿಲ್ಲಾ ಪ್ರವಾಸ ಮಾಡಿಲ್ಲ, ಅಧಿಕಾರಿಗಳ ಸಭೆ ಕೂಡ ಕರೆದಿಲ್ಲ. ಕಾಂಗ್ರೆಸ್ ಪಕ್ಷದ ಸಭೆಯಲ್ಲಿ ಬರದ ವಿಚಾರ ಮಾತನಾಡದೆ ಲೋಕಸಭಾ ಚುನಾವಣಾ ಗೆಲ್ಲುವಬಗ್ಗೆ ಚರ್ಚೆ ನಡೆಯುತ್ತಿದೆ. ರಾಜ್ಯದ ಕಾಂಗ್ರೆಸ್ ಸರಕಾರ ರೈತರು, ಬಡವರು, ದಲಿತರ ವಿರೋಧಿ ಸರ್ಕಾರ. ಜನಪ್ರಿಯತೆ ಕಳೆದುಕೊಂಡ ಸರ್ಕಾರ ಇದ್ದರೆ ಅದು ಕಾಂಗ್ರೆಸ್ ಸರ್ಕಾರ ಎಂದು ಹೇಳಿದರು.





ರೈತರು ಪರದಾಡುತ್ತಿರುವ ಈ ಸಂದರ್ಭದಲ್ಲಿ ಬೋರ್ಡ್ ಚುನಾವಣೆ ಬಗ್ಗೆ ಮಾತಾಡುತ್ತಾರೆ. ಬಿಜೆಪಿ ಸರಿಯಾದ ರೀತಿಯಲ್ಲಿ ವಿದ್ಯುತ್ ನೀಡುತ್ತಿತ್ತು. ಈಗ ವಿದ್ಯುತ್ ಅಭಾವ ಸೃಷ್ಟಿಯಾಗಿ ಎರಡು ತಾಸು ಕೂಡಾ ವಿದ್ಯುತ್ ಸಿಗುತ್ತಿಲ್ಲ. ಸರ್ಕಾರ ಬಂದು ಆರು ತಿಂಗಳು ಆದರೂ ಅಧಿಕಾರ ಹಿಡಿದವರು ಮೋಜಿನಲ್ಲಿ ಮುಳುಗಿದ್ದಾರೆ. ರಾಜ್ಯ ಸರ್ಕಾರ ಜವಾಬ್ದಾರಿ ಮರೆತಿದೆ. ಮುಂದೆ ಕಿವಿ ಹಿಂಡುವ ಕೆಲಸ ಮಾಡುತ್ತೇವೆ‌‌. ಕಾಂಗ್ರೆಸ್ ಹಿಂದೆ ಅಧಿಕಾರದಲ್ಲಿದ್ದಾಗ ಬಹಳಷ್ಟು ಹಿಂದೂ ಕಾರ್ಯಕರ್ತರ ಹತ್ಯೆಯಾಗಿತ್ತು. ಮುಂದೆ ಅದು ಆಗದಂತೆ ಎಚ್ಚರ ವಹಿಸುತ್ತೇವೆ. ಅದಕ್ಕಾಗಿ ನಾವೆಲ್ಲರೂ ಒಗಟ್ಟಾಗಿ ಒಂದಾಗಿ ಲೋಕಸಭಾ ಚುನಾವಣೆ ಎದುರಿಸಿ 28 ಲೋಕಸಭಾ ಕ್ಷೇತ್ರವನ್ನು ಚುನಾವಣೆ ಗೆದ್ದು ಮೂರನೇ ಬಾರಿಗೆ ಮೋದಿಯವರನ್ನು ಪ್ರಧಾನಮಂತ್ರಿ ಮಾಡುತ್ತೇವೆ ಎಂದು ಬಿ.ವೈ.ವಿಜಯೇಂದ್ರ ಹೇಳಿದರು.




Ads on article

Advertise in articles 1

advertising articles 2

Advertise under the article

ಸುರ