-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಇಂದು ( ಡಿ.1)  "ರಾಪಾಟ" ತುಳು ಸಿನಿಮಾ ಬಿಡುಗಡೆ

ಇಂದು ( ಡಿ.1) "ರಾಪಾಟ" ತುಳು ಸಿನಿಮಾ ಬಿಡುಗಡೆ


ಬೊಳ್ಳಿ ಮೂವೀಸ್ ಹಾಗೂ ಅವಿಕಾ ಪ್ರೊಡಕ್ಷನ್ಸ್ ನಿರ್ಮಾಣದ ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು, ಅರ್ಜುನ್ ಕಾಪಿಕಾಡ್ ನಿರ್ದೇಶನದ ಚೊಚ್ಚಲ ಸಿನಿಮಾ ರಾಪಟ ಡಿ.1 ರಂದು ಅದ್ದೂರಿಯಾಗಿ ಕರಾಳಿಯಾದ್ಯಂತ ತೆರೆಕಾಣಲಿದೆ. 

ತುಳುನಾಡಿನ ಹಾಸ್ಯ ದಿಗ್ಗಜರು ಚಿತ್ರದಲ್ಲಿ ನಟಿಸಿದ್ದು, ತಾಂತ್ರಿಕ ವಿಭಾಗದಲ್ಲೂ ಅನುಭವಿ ತಂಡ ಕೆಲಸ ಮಾಡಿದೆ. ಸಂಪೂರ್ಣ ಹಾಸ್ಯ ಮನರಂಜನೆಯ ರಾಪಟ ಸಿನಿಮಾದಲ್ಲಿ ಉತ್ತಮ ಕತೆ ಇದೆ. ಅರ್ಜುನ್ ಕಾಪಿಕಾಡ್ ನಿರ್ದೇಶನದ ಸಿನಿಮಾದಲ್ಲಿ ಖ್ಯಾತ ಕಲಾವಿದರು ಅಭಿನಯಿಸಿದ್ದಾರೆ. ಅನೂಪ್ ಸಾಗರ್ ನಾಯಕ ನಟನಾಗಿ ಹಾಗೂ ನಿರೀಕ್ಷ ಶೆಟ್ಟಿ ನಾಯಕಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ತುಳು ಚಿತ್ರ ರಂಗದ ದಿಗ್ಗಜರಾದ ದೇವದಾಸ್ ಕಾಪಿಕಾಡ್, ಅರವಿಂದ ಬೋಳಾರ್, ಭೋಜರಾಜ್ ವಾಮಂಜೂರು, ಸಾಯಿ ಕೃಷ್ಣ ಕುಡ್ಲ, ದೀಪಕ್ ರೈ ಪಾಣಾಜೆ, ರೂಪಶ್ರೀ ವರ್ಕಾಡಿ , ಪ್ರಕಾಶ್ ತೂಮಿನಾಡು, ವಿಕೀಶಾ, ರವಿರಾಮ ಕುಂಜ ಮುಂತಾದವರು ನಟಿಸಿದ್ದು, ಸಹ ನಿರ್ದೇಶಕರಾಗಿ ಶನಿಲ್ ಗುರು, ಸಿನಿಮಾಟೋಗ್ರಾಫರ್ ರಾಗಿ ಸಚಿನ್ ಎಸ್.ಶೆಟ್ಟಿ, ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಸಂದೀಪ್ ಶೆಟ್ಟಿ, ಎಡಿಟರ್ ಯಶ್ವಿನ್.ಕೆ. ಶೆಟ್ಟಿಗಾರ್, ಸಂಗೀತ ಪ್ರಸಾದ್.ಕೆ. ಶೆಟ್ಟಿ, ನಿರ್ಮಾಪಕರಾಗಿ ಸಂತೋಷ್ ಸುವರ್ಣ, ಸೂರ್ಯಕಾಂತ್ ಸುವರ್ಣ, ರಾಜನ್ ರಾಕೇಶ್ ಶೆಟ್ಟಿ, ಆಶಿಕಾ ಸುವರ್ಣ, ದೇವಿಕಾ ಆಚಾರ್ಯ, ಶೈಲರಾಜ್ ಪೂಜಾರಿ, ಅಭಿಶೆಟ್ಟಿ, ಮನೋಜ್‌ಶೆಟ್ಟಿ, ಯಕ್ಷಿತ್ ಶೆಟ್ಟಿ, ಮಧು ಕುಮಾರ್ ಕಾರ್ಯನಿರ್ವಹಿಸಿದ್ದಾರೆ. ರಾಪಟ ತುಳು ಸಿನಿಮಾ ಸೆಪ್ಟೆಂಬರ್ 9 ಮತ್ತು 10ರಂದು ಯುಎಇ, ಸೆ. 15ರಂದು ಬಹರೈನ್, ಸೆ.22ರಂದು ಮಸ್ಕತ್, ಸೆ.29ರಂದು ಕತಾರ್‌ನಲ್ಲಿ ಪ್ರೀಮಿಯರ್ ಶೋ ನಡೆದಿದ್ದು, ಸಿನಿಪ್ರೇಕ್ಷಕರಿಂದ ಮೆಚ್ಚುಗೆ ಪಡೆದುಕೊಂಡಿದೆ.

Ads on article

Advertise in articles 1

advertising articles 2

Advertise under the article

ಸುರ