ವಿಜಯಪುರ: "ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಕೊರೊನಾಗೆ ಸಂಬಂಧಿಸಿದಂತೆ 40 ಸಾವಿರ ಕೋಟಿ ರೂ. ಅವ್ಯವಹಾರ ಆಗಿದೆ. ಸತ್ಯ ಹೇಳಿದ್ದಕ್ಕೆ ನನ್ನನ್ನು ಪಕ್ಷದಿಂದ ಉಚ್ಚಾಟಿಸಲಿ ಅಥವಾ ನೋಟಿಸ್ ನೀಡಲಿ, ಹೆದರುವುದಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, "ನನಗೂ ಕೊರೊನಾ ಆಗಿತ್ತು. ಆ ವೇಳೆ ನನಗೂ 5 ಲಕ್ಷ 80 ಸಾವಿರ ರೂ. ಬಿಲ್ ಮಾಡಿದ್ದಾರೆ. ನನಗೆ ಲೂಟಿ ಮಾಡುವ ಚಟ ಇಲ್ಲ. 45 ರೂ. ಮಾಸ್ಕ್‌ಗೆ 485 ರೂ. ಬಿಲ್ ಹಾಕಲಾಗಿದೆ. ಕೊರೊನಾ ಬೆಡ್‌ನಲ್ಲೂ ಅವ್ಯವಹಾರ ನಡೆದಿದೆ," ಎಂದು ತಮ್ಮ ಪಕ್ಷದ ವಿರುದ್ಧವೇ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದರು.
ಯತ್ನಾಳ್ ನೇರ ಆರೋಪಿಸುವ ಮೂಲಕ ಹಿಂದಿನ ಬಿಜೆಪಿ ಸರಕಾರದ ಭ್ರಷ್ಟಾಚಾರಕ್ಕೆ ಸಾಕ್ಷ್ಯ ಒದಗಿಸಿದ್ದಾರೆ ಎಂದು ಸಿಎಂ ಪ್ರತಿಕ್ರಿಯಿಸಿದ್ದಾರೆ.