ಆನ್ಲೈನ್ ಬೆಟ್ಟಿಂಗ್ ನಲ್ಲಿ ಹಣ ಹೂಡುವಂತೆ ಪುಸಲಾಯಿಸಿ 7ಲಕ್ಷ ವಂಚನೆ


ಕೋಟ: ಆನ್‌ಲೈನ್‌ ಬೆಟ್ಟಿಂಗ್‌ನಲ್ಲಿ ಲಾಭ ಮಾಡಿ ಕೊಡುತ್ತೇನೆ ಎಂದು ಪುಸಲಾಯಿಸಿ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರವೀಣ ಹಾಗೂ ಅಜಿತ್ ಕುಮಾರ್ ವಂಚಕ ಆರೋಪಿಗಳು.

ಇವರು ಆದಿತ್ಯ ಎಂಬವರಲ್ಲಿ ಆನ್‌ಲೈನ್ ಬೆಟ್ಟಿಂಗ್ ಗೇಮ್ ಆಡಿದರೆ ಹಣ ದುಪ್ಪಟ್ಟು ಆಗುತ್ತದೆ ಎಂದು ನಂಬಿಕೆ ಹುಟ್ಟಿಸಿ ಹಣ ಹೂಡಿಕೆ ಮಾಡುವಂತೆ ಪುಸಲಾಯಿಸಿದ್ದಾರೆ. ಆರೋಪಿಗಳಿಬ್ಬರೂ ಆದಿತ್ಯರಿಂದ ಒಟ್ಟು 7,00,000 ರೂ. ಹಣವನ್ನು ತಮ್ಮ ಖಾತೆಗೆ ವರ್ಗಾಯಿಸಿಕೊಂಡು ವಂಚನೆ ಮಾಡಿದ್ದಾರೆ ಎಂದು ಪೊಲೀಸ್ ದೂರು ದಾಖಲಾಗಿದೆ.

ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.