ಫರಂಗಿಪೇಟೆಯಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ಮೃತ್ಯು

ಫರಂಗಿಪೇಟೆ: ಹಿಂಭಾಗದಿಂದ ಬರುತ್ತಿದ್ದ ಬಸ್ ಢಿಕ್ಕಿಯಾದ ಪರಿಣಾಮ ಬೈಕ್‌ ಸವಾರನೊಬ್ಬ ಮೃತಪಟ್ಟ ಘಟನೆ ರವಿವಾರ ಬೆಳಗ್ಗೆ ಅರ್ಕುಳ ದ್ವಾರದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಕುಕ್ಕಾಜೆ ನಿವಾಸಿ ಹಂಝ ಅಲಿಯಾಸ್ ರಮ್ಲಾನ್ ಮೃತಪಟ್ಟ ವ್ಯಕ್ತಿ. ಮಂಗಳೂರಿಂದ ಬರುತ್ತಿದ್ದ ವೇಳೆ ಹಿಂದಿನಿಂದ ಬಂದ ಬಸ್, ಹಂಝ ಅವರ ಬೈಕ್ ಗೆ ಢಿಕ್ಕಿ ಹೊಡೆದಿದೆ. ಪರಿಣಾಮ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡ ರಮ್ಲಾನ್ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಬೈಕ್ ನ ಹಿಂಬದಿಯಲ್ಲಿದ್ದ ರಮ್ಲಾನ್ ಅವರ ಪತ್ನಿ ಬಜಾಲ್ ಮೂಲದ ರೈಹಾನ ಮತ್ತು ಮಗು ಅದೃಷ್ಟಶಾತ್‌ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

BREAKING NEWS
Loading latest news...
Join our WhatsApp Channel Powered By : Online Pudu