ಆಳ್ವಾಸ್ ವಿರಾಸತ್: ಈ ಬಾರಿಯ ನಾಲ್ಕು ದಿನಗಳ ಕಾರ್ಯಕ್ರಮಗಳು, ವಿಶೇಷತೆಗಳೇನು..?
ಆಳ್ವಾಸ್ ವಿರಾಸತ್: ಈ ಬಾರಿಯ ನಾಲ್ಕು ದಿನಗಳ ಕಾರ್ಯಕ್ರಮಗಳು, ವಿಶೇಷತೆಗಳೇನು..?
ಸಾಂಸ್ಕೃತಿಕ ಕೇಂದ್ರವಾಗಿರುವ ಮೂಡಬಿದಿರೆಯಲ್ಲಿ 29ನೇ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಆಳ್ವಾಸ್ ವಿರಾಸತ್‌ಗೆ ಅದ್ಧೂರಿಯ ಸಿದ್ಧತೆ ನಡೆದಿದೆ. ಇಂದಿನಿಂದ ನಾಲ್ಕು ದಿನ ರಸದೌತಣಕ್ಕೆ ಆಳ್ವಾಸ್ ಸಾಕ್ಷಿಯಾಗಲಿದೆ.
ಸಂಜೆ 6:35ಕ್ಕೆ 29ನೇ ಆಳ್ವಾಸ್ ವಿರಾಸತ್‍ನ ಅದ್ದೂರಿಯ ಸಾಂಸ್ಕೃತಿಕ ಮೆರವಣಿಗೆ ನಡೆಯಲಿದೆ. 100ಕ್ಕಿಂತಲೂ ಅಧಿಕ ದೇಶೀಯ ಜಾನಪದ ಕಲಾ ತಂಡಗಳ ಕಲಾವಿದರಿಂದ ವೈವಿಧ್ಯಮಯ ಭವ್ಯ ಸಾಂಸ್ಕೃತಿಕ ಮೆರವಣಿಗೆ ನಡೆಯಲಿದೆ.
ರಾತ್ರಿ 8:05ಕ್ಕೆ ವೇದಘೋಷಗಳು, ಭಜನೆಗಳು, ಪುಷ್ಪಪಲ್ಲಕ್ಕಿಗಳು, ಮಂಗಳವಾದ್ಯಗಳೊಂದಿಗೆ ಸಾಂಸ್ಕೃತಿಕ ರಥ ಸಂಚಲನ ಮತ್ತು ರಥಾರತಿ ನಡೆಯಲಿದೆ.
ಸಾಂಸ್ಕೃತಿಕ ಕಾರ್ಯಕ್ರಮಗಳು:
ಡಿಸೆಂಬರ್ 15ರಂದು ಇಳಿ ಹೊತ್ತು 6 ರಿಂದ 8 ಗಂಟೆಯ ವರೆಗೆ ಚಲನಚಿತ್ರ ಖ್ಯಾತ ಹಿನ್ನೆಲೆ ಗಾಯಕ ಬೆನ್ನಿ ದಯಾಲ್ ಅವರಿಂದ ‘ಗಾನ ವೈಭವ’ ನಡೆಯಲಿದೆ.
ಡಿಸೆಂಬರ್ 16ರಂದು ಬಾಲಿವುಡ್‌ನ ಖ್ಯಾತ ಹಿನ್ನೆಲೆ ಗಾಯಕಿ ಶ್ರೇಯಾ ಘೋಷಾಲ್ ಮತ್ತು ಬಳಗದವರಿಂದ ‘ಭಾವ ಲಹರಿ’ ಹಾಡುಗಳ ಸರಮಾಲೆ ಕಾರ್ಯಕ್ರಮ ನಡೆಯಲಿದೆ.
ಎರಡೂ ದಿನಗಳೂ ಸಂಜೆ 5:45ಕ್ಕೆ ದ್ವೀಪ ಉರಿಸಿ ಉದ್ಘಾಟನಾ ಕಾರ್ಯಕ್ರಮ ಮತ್ತು ಕಲಾವಿದರಿಗೆ ಸಾಂಪ್ರದಾಯಿಕ ಸ್ವಾಗತ ನೀಡುವ ಕಾರ್ಯಕ್ರಮ ನಡೆಯಲಿದೆ.
ಡಿಸೆಂಬರ್ 17ರಂದು ಇಳಿಹೊತ್ತು 5:15 ಗಂಟೆಗೆ ಆಳ್ವಾಸ್ ವಿರಾಸತ್-2023 ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಈ ಬಾರಿ ಪ್ರತಿಷ್ಠಿತ ಪ್ರಶಸ್ತಿಯನ್ನು ಡಾ.ಮೈಸೂರು ಮಂಜುನಾಥ್, ಡಾ. ಪ್ರವೀಣ್ ಗೋಡ್ಖಿಂಡಿ ಹಾಗೂ ವಿಜಯ ಪ್ರಕಾಶ್ ಅವರಿಗೆ ಪ್ರದಾನ ಮಾಡಲಾಗುವುದು.
ಬಳಿಕ ಸಂಜೆ 6:30ಕ್ಕೆ ಡಾ. ಮೈಸೂರು ಮಂಜುನಾಥ್ ಮತ್ತು ಡಾ.ಪ್ರವೀಣ್ ಗೋಡ್ಖಿಂಡಿ ಮತ್ತು ವಿಜಯ ಪ್ರಕಾಶ್ ಅವರಿಂದ ‘ತಾಳ-ವಾದ್ಯ- ಸಂಗೀತ’ ನಡೆಯಲಿದೆ. ರಾತ್ರಿ 7:30ಕ್ಕೆ ಚಲನಚಿತ್ರ ಪ್ರಸಿದ್ಢ ಹಿನ್ನೆಲೆ ಗಾಯಕ ವಿಜಯ ಪ್ರಕಾಶ್ ಅವರಿಂದ ಸಂಗೀತ ರಸ ಸಂಜೆ ನಡೆಯಲಿದೆ. 9.30ಕ್ಕೆ ಆಳ್ವಾಸ್ ಸಾಂಸ್ಕೃತಿಕ ವೈಭವ ಇರಲಿದೆ.