BANTWALA- ಹಣ ದ್ವಿಗುಣಗೊಳಿಸುವ ಆ್ಯಪ್ ನಲ್ಲಿ 21 ಲಕ್ಷ ಕಳೆದುಕೊಂಡ ಮಹಿಳೆ ಆತ್ಮಹತ್ಯೆ
🎁 Amazon Prime ಸದಸ್ಯರಾಗಿರಿ

👉 ಉಚಿತ shipping, Prime Video, shopping deals—all in one!
Disclosure: ಈ ಲಿಂಕ್ Amazon Affiliate Program ನ ಭಾಗವಾಗಿದೆ. ನೀವು ಈ ಲಿಂಕ್ ಮೂಲಕ Prime ಸದಸ್ಯರಾಗಿದರೆ, ನಮಗೆ commission ಸಿಗಬಹುದು.
ಬಂಟ್ವಾಳ: ತಾಲೂಕಿನ ಸಂಗಬೆಟ್ಟು ಸಮೀಪದ ಪುಚ್ಚಮೊಗರು ಎಂಬಲ್ಲಿ ಫಲ್ಗುಣಿ ನದಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕುಕ್ಕಿಪಾಡಿ ಗ್ರಾಮದ ಏರೋಡಿಯ ಜಾನ್ ಸಂತೋಷ್ ಡಿಸೋಜ ಅವರ ಪತ್ನಿ ವೀಟಾ ಮರಿನಾ ಡಿಸೋಜ (32) ಮೃತ ಮಹಿಳೆ
ಅವರು ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಹಣ ದ್ವಿಗುಣಗೊಳಿಸುವ ಆ್ಯಪ್ ನಲ್ಲಿ ರೂ 21 ಲಕ್ಷ ಹೂಡಿಕೆ ಮಾಡಿ, ಹಣ ಕಳೆದುಕೊಂಡಿದ್ದರು. ಈ ಬಗ್ಗೆ ಪೊಲೀಸ್ ಠಾಣೆಗೂ ದೂರು ನೀಡಿದ್ದರು.
READ
ಮಕ್ಕಳು ಇಲ್ಲ ಎಂಬ ಕೊರಗು ಇವರಿಗೆ ಕಾಡುತ್ತಿತ್ತು. ಇದರ ಜೊತೆಗೆ ಆರ್ಥಿಕ ಸಂಕಷ್ಟದಿಂದ ಇವರು ಈ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದಾರೆ.
ವೀಟಾ ಅವರು ಶನಿವಾರ ರಾತ್ರಿ 9 ಗಂಟೆಗೆ ಮನೆಯಿಂದ ದ್ವಿಚಕ್ರ ವಾಹನದಲ್ಲಿ ತೆರಳಿದ್ದರು. ಬಳಿಕ ನಾಪತ್ತೆಯಾಗಿದ್ದರು. ಆ ಬಳಿಕ ವಿಷಯ ತಿಳಿದು ಸ್ಥಳೀಯರು ಹುಡುಕಾಟ ನಡೆಸಿದಾಗ ಫಲ್ಗುಣಿ ಸೇತುವೆಯಲ್ಲಿ ಇವರ ದ್ವಿಚಕ್ರ ವಾಹನ ಮಾತ್ರ ಪತ್ತೆಯಾಗಿತ್ತು. ಅಗ್ನಿಶಾಮಕದಳದ ಸಿಬ್ಬಂದಿ ನದಿಯಲ್ಲಿ ಹುಡುಕಾಡಿದ್ದರು. ಬಹುಗ್ರಾಮ ಕುಡಿಯುವ ನೀರು ಪೂರೈಕೆಗಾಗಿ ನಿರ್ಮಿಸಿರುವ ಅಣೆಕಟ್ಟೆ ಬಳಿ ರವಿವಾರ ಮೃತದೇಹ ಪತ್ತೆಯಾಗಿದೆ.
ಈ ಹಿಂದೆ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿದ್ದ ವೀಟಾ ಬಳಿಕ ಹುದ್ದೆ ತೊರೆದು ವಿಮಾ ಪ್ರತಿನಿಧಿಯಾಗಿ ಗುರುತಿಸಿಕೊಂಡಿದ್ದರು.
ಬಂಟ್ವಾಳ ಗ್ರಾಮಾಂತರ ಠಾಣೆ ಮಹಿಳಾ ಎಸ್ ಐ ಭಾರತಿ ನೇತೃತ್ವದ ಪೊಲೀಸರ ತಂಡ ಸ್ಥಳಕ್ಕೇ ಭೇಟಿ ನೀಡಿ, ಮಹಜರು ನಡೆಸಿದ ಬಳಿಕ ಪ್ರಕರಣ ದಾಖಲಿಸಿಕೊಂಡಿದೆ.