ಮಂಗಳೂರು: ಎಂಡಿಎಂಎ ಮಾದಕದ್ರವ್ಯ ಮಾರಾಟ ಮಾಡುತ್ತಿದ್ದ ಆರೋಪಿಗಳಿಬ್ಬರು ಸಿಸಿಬಿ ಬಲೆಗೆ


ಮಂಗಳೂರು: ನಿಷೇಧಿತ ಮಾದಕದ್ರವ್ಯ ಎಂಡಿಎಂಎಯನ್ನು ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಬಂಧಿತರಿಂದ 6 ಲಕ್ಷ ಮೌಲ್ಯದ ಮಾದಕದ್ರವ್ಯವನ್ನು ವಶಪಡಿಸಿಕೊಳ್ಳಲಾಗಿದೆ.

ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಪಾವೂರು ನಿವಾಸಿ ನವಾಜ್(40), ಬಂಟ್ವಾಳ ತಾಲೂಕಿನ ಫರಂಗಿಪೇಟೆ ಪುದು ಗ್ರಾಮದ ಅಜರುದ್ದೀನ್ ಅಲಿಯಾಸ್ ಅಜರ್(38) ಬಂಧಿತ ಆರೋಪಿಗಳು.


ನಗರದ ಕದ್ರಿ ಪಾರ್ಕ್ ಪರಿಸರದಲ್ಲಿ ಆರೋಪಿಗಳು ನಿಷೇಧಿತ ಮಾದಕದ್ರವ್ಯ ಎಂಡಿಎಂಎಯನ್ನು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು‌. ಈ ಬಗ್ಗೆ ಖಚಿತ ಮಾಹಿತಿ ಲಭ್ಯವಾದಂತೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿಗಳಾದ ನವಾಜ್ ಹಾಗೂ ಅಜರುದ್ದೀನ್ ರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ ಒಟ್ಟು 120 ಗ್ರಾಂ ತೂಕದ 6,00,000 ರೂ. ಮೌಲ್ಯದ ಎಂಡಿಎಂಎಯನ್ನು ವಶಪಡಿಸಿಕೊಂಡಿದ್ದಾರೆ‌.

ಅಲ್ಲದೆ ಮೂರು ಮೊಬೈಲ್ ಫೋನ್ ಗಳು, ಡಿಜಿಟಲ್ ತೂಕಮಾಪನ, ಒಂದು ಸ್ಕೂಟರ್ ಅನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ  6,83,120 ರೂ. ಆಗಬಹುದೆಂದು ಅಂದಾಜಿಸಲಾಗಿದೆ. ಆರೋಪಿಗಳ ವಿರುದ್ಧ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ.
   
BREAKING NEWS
Loading latest news...
Join our WhatsApp Channel Powered By : Online Pudu