ಹಿಜಾಬ್ ನಿಷೇಧ ಆದೇಶ ವಾಪಾಸ್- ಸಿಎಂ ಸಿದ್ದರಾಮಯ್ಯ
Friday, December 22, 2023
ಮೈಸೂರು; ರಾಜ್ಯದಲ್ಲಿ ಹಿಜಾಬ್ ನಿಷೇಧ ಆದೇಶ ವಾಪಾಸು ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕರ್ನಾಟದ ಉಡುಪಿಯಿಂದ ಆರಂಭಗೊಂಡಿದ್ದ ಹಿಜಾಬ್ ಹೋರಾಟ ದೇಶಾದ್ಯಂತ ಭಾರಿ ಪ್ರತಿಭಟನೆ, ಹೋರಾಟಕ್ಕೆ ಕಾರಣವಾಗಿತ್ತು. ಈ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಹಿಂದಿನ ಬಿಜೆಪಿ ಸರ್ಕಾರದ ವೇಳೆ ನಡೆದ ಈ ಹಿಜಾಬ್ ಗಲಾಟೆ ರಾಜಕೀಯ ಗುದ್ದಾಟಕ್ಕೂ ಕಾರಣಾಗಿತ್ತು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಹಿಜಾಬ್ ನಿಷೇಧ ಆದೇಶ ವಾಪಸ್ ಪಡೆಯುತ್ತೇವೆ ಎಂದಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ ರಾಜ್ಯದಲ್ಲಿ ಹಿಜಾಬ್ ನಿಷೇಧ ಆದೇಶವನ್ನು ಸರ್ಕಾರ ವಾಪಸ್ ತೆಗೆದುಕೊಳ್ಳಲಿದೆ. ಯಾವ ಡ್ರೆಸ್ ಹಾಕಿಕೊಂಡರೆ ನಮಗೇನು? ಅದು ಅವರವರ ಇಚ್ಚೆ. ಯಾವ ಊಟವನ್ನಾದ್ರೂ ಮಾಡ್ರಪ್ಪ, ನಮಗೇನು? ಎಂದು ಹೇಳಿದರು.