-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳೂರು: ಹಿಜಾಬ್ ರದ್ದತಿ ಆದಲ್ಲಿ ರಾಜ್ಯದ ಶಾಲಾ ಕಾಲೇಜುಗಳು ಕೇಸರಿಮಯವಾಗಲಿದೆ - ಶರಣ್ ಪಂಪ್ ವೆಲ್ ಎಚ್ಚರಿಕೆ

ಮಂಗಳೂರು: ಹಿಜಾಬ್ ರದ್ದತಿ ಆದಲ್ಲಿ ರಾಜ್ಯದ ಶಾಲಾ ಕಾಲೇಜುಗಳು ಕೇಸರಿಮಯವಾಗಲಿದೆ - ಶರಣ್ ಪಂಪ್ ವೆಲ್ ಎಚ್ಚರಿಕೆ

ಮಂಗಳೂರು: ಬಿಜೆಪಿ ಸರಕಾರ ರದ್ದುಗೊಳಿಸಿರುವ ಹಿಜಾಬ್ ಅನ್ನು ತರಗತಿಯಲ್ಲಿ ಹಾಕಲು ಬಿಡುತ್ತೇವೆ ಎಂಬ ಸಿಎಂ ಸಿದ್ದರಾಮಯ್ಯರ ಹೇಳಿಕೆಗೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಆಕ್ರೋಶ ವ್ಯಕ್ತಪಡಿಸಿ, ಹಿಜಾಬ್ ರದ್ದತಿಯನ್ನು ವಾಪಸ್ ಪಡೆದಲ್ಲಿ ಕರ್ನಾಟಕದ ಎಲ್ಲಾ ಶಾಲಾ ಕಾಲೇಜುಗಳು ಕೇಸರಿಮಯವಾಗಲಿದೆ ಎಂಬ ಎಚ್ಚರಿಕೆ ನೀಡಿದರು.




ಇನ್ನೇನು ವಾರ್ಷಿಕ ಪರೀಕ್ಷೆಗಳು ಆರಂಭವಾಗಲಿದೆ. ಇಂತಹ ಸಂದರ್ಭ ಪರೀಕ್ಷೆ ಬರಬೇಕಾದರೆ ಹಿಜಾಬ್, ಬುರ್ಖಾ ಧರಿಸಿ ಬರಲು ಅವಕಾಶ ಕೊಡುತ್ತೇವೆ. ಹಿಜಾಬ್ ಆದೇಶ ರದ್ದು ಮಾಡುತ್ತೇವೆ ಎಂಬಂತಹ ಹೇಳಿಕೆ ಕೊಡುವ ಮೂಲಕ ಕರ್ನಾಟಕದ ವಿದ್ಯಾರ್ಥಿಗಳಲ್ಲಿ ಮತಾಂಧತೆಯ ವಿಷಬೀಜ ಬಿತ್ತುವ ಕೆಲಸವನ್ನು ಸಿಎಂ ಸಿದ್ದರಾಮಯ್ಯ ಮಾಡುತ್ತಿದ್ದಾರೆ.

ಉಡುಪಿಯಲ್ಲಿ ಆರಂಭವಾದ ಹಿಜಾಬ್ ಗಲಾಟೆ ಇಡೀ ರಾಜ್ಯದಲ್ಲಿ ದೊಡ್ಡ ಮಟ್ಟದ ಸಂಘರ್ಷವನ್ನೇ ಸೃಷ್ಟಿಸಿತ್ತು. ಕೇವಲ ಐವರು ವಿದ್ಯಾರ್ಥಿನಿಯಿಂದ ಹಿಜಾಬ್ ಧರಿಸಲು ಅವಕಾಶ ನೀಡಬೇಕೆಂದು ಪ್ರತಿಭಟನೆ ನಡೆಸಿದ್ದಕ್ಕೆ ಪಿಎಫ್ಐ, ಎಸ್ ಡಿಪಿಐ ಬೆಂಬಲ ನೀಡಿತ್ತು‌. ಈ ಬೆಂಬಲದಿಂದಲೇ ಕರ್ನಾಟಕದ್ಯಂತ ಘರ್ಷಣೆಗಳು, ಗಲಭೆಗಳು ಸೃಷ್ಟಿಯಾಗಿತ್ತು. ಇದೀಗ ಪಿಎಫ್ಐ ಬ್ಯಾನ್ ಆದರೂ ಅವರ ಮಾನಸಿಕತೆ ಮುಂದುವರಿಯುತ್ತಿದೆ. ಪಿಎಫ್ಐಗೆ ಬೆಂಬಲ ಕೊಡುವ ಕಾರ್ಯವನ್ನು ಸಿದ್ದರಾಮಯ್ಯನವರು ಮಾಡುತ್ತಿದ್ದಾರೆ. ಆದ್ದರಿಂದ ಪಿಎಫ್ಐ ಬದಲು ಕಾಂಗ್ರೆಸ್ ಈ ಕೆಲಸ ಮಾಡುತ್ತಿದೆ ಎಂಬ ಸಂಶಯ ಬಲವಾಗುತ್ತಿದೆ ಎಂದರು.

ಸಿದ್ದರಾಮಯ್ಯನವರು ಓಟಿಗಾಗಿ, ತುಷ್ಟೀಕರಣಕ್ಕಾಗಿ ಒಂದು ವರ್ಗದವರನ್ನು ಮೆಚ್ಚಿಸಲು ಹೊರಟಿದ್ದಾರೆ. ಇದು ಸರಿಯಲ್ಲ. ಆರಂಭದಲ್ಲಿ ಈ ಸರಕಾರ ಸರ್ವ ಜನಾಂಗದ ಶಾಂತಿಯ ತೋಟ ಎಂದು ಹೇಳಿದ್ದರು‌. ಆದರೆ ಈಗ ಒಂದು ಕಣ್ಣಿಗೆ ಬೆಣ್ಣೆ ಒಂದು ಕಣ್ಣಿಗೆ ಸುಣ್ಣ ಹಾಕಲು ಹೊರಟಿದ್ದಾರೆ. ಆದ್ದರಿಂದ ಈ ಹಿಜಾಬ್ ರದ್ದತಿ ಆದೇಶ ವಾಪಸ್ ತೆಗೆದುಕೊಳ್ಳುವುದನ್ನು ಬಲವಾಗಿ ವಿರೋಧಿಸುತ್ತೇವೆ. ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ಸಂಘರ್ಷವಾದಲ್ಲಿ ಅದಕ್ಕೆ ಕಾಂಗ್ರೆಸ್ ಸರಕಾರವೇ ನೇರ ಕಾರಣ ಎಂದು ಶರಣ್ ಪಂಪ್ ವೆಲ್ ಆಕ್ರೋಶ ವ್ಯಕ್ತಪಡಿಸಿದರು.

Ads on article

🎁 Amazon Prime ಸದಸ್ಯರಾಗಿರಿ

Amazon Prime Offer
👉 ಉಚಿತ shipping, Prime Video, shopping deals—all in one!

Disclosure: ಈ ಲಿಂಕ್ Amazon Affiliate Program ನ ಭಾಗವಾಗಿದೆ. ನೀವು ಈ ಲಿಂಕ್ ಮೂಲಕ Prime ಸದಸ್ಯರಾಗಿದರೆ, ನಮಗೆ commission ಸಿಗಬಹುದು.

Advertise in articles 1

advertising articles 2

Advertise under the article