JOB NEWS- ಅರಣ್ಯ ಇಲಾಖೆಯಲ್ಲಿ 540 ಹುದ್ದೆ ಖಾಲಿ ಇದೆ- ಅರ್ಜಿ ಸಲ್ಲಿಕೆಗೆ ಡಿ.30 ಕೊನೆ ದಿನಾಂಕ




ಉದ್ಯೋಗ ಸುದ್ದಿ


ನೇಮಕಾತಿ ಇಲಾಖೆ: ಕರ್ನಾಟಕ ಅರಣ್ಯ ಇಲಾಖೆ


ಹುದ್ದೆ: ಅರಣ್ಯ ರಕ್ಷಕರು


ಒಟ್ಟು ಹುದ್ದೆಗಳು: 540


ವಿದ್ಯಾರ್ಹತೆ: ದ್ವಿತೀಯ ಪಿಯುಸಿ ತೇರ್ಗಡೆ


ವಯೋಮಿತಿ: ಕನಿಷ್ಠ 18 ವರ್ಷ. ಗರಿಷ್ಠ ವಯೋಮಿತಿ: ಸಾಮಾನ್ಯ ಅಭ್ಯರ್ಥಿಗಳಿಗೆ 27 ವರ್ಷ, ಎಸ್‌ಸಿ/ ಎಸ್‌ಟಿ/ಪ್ರವರ್ಗ-1 ಅಭ್ಯರ್ಥಿಗಳಿಗೆ 32 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 30 ವರ್ಷ.


ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್


ಆಯ್ಕೆ ವಿಧಾನ: ಪಿಯುಸಿಯಲ್ಲಿ ಪಡೆದ ಅಂಕಗಳ ಆಧಾರದಲ್ಲಿ ಮೀಸಲಾತಿಗೆ ಅನುಗುಣವಾಗಿ ಮತ್ತು ಖಾಲಿ ಹುದ್ದೆಗಳ ಸಂಖ್ಯೆಗನುಗುಣವಾಗಿ ಅರ್ಹ ಅಭ್ಯರ್ಥಿಗಳನ್ನು ಶಾರ್ಟ್ಲಿಸ್ಟ್ ಮಾಡಲಾಗುತ್ತದೆ. ದೇಹದಾರ್ಡ್ಯತೆ, ದೈಹಿಕ ತಾಳ್ವಿಕೆ, ದೈಹಿಕ ಕಾರ್ಯ ಸಮರ್ಥತೆ ಪರೀಕ್ಷೆಗಳನ್ನು ಹಂತಹಂತವಾಗಿ ನಡೆಸಿ, ಇವುಗಳಲ್ಲಿ ಅರ್ಹತೆ ಪಡೆದವರನ್ನು ಲಿಖಿತ ಪರೀಕ್ಷೆಗೆ ಆಹ್ವಾನಿಸಲಾಗುತ್ತದೆ. ಪಿಯುಸಿ ಮತ್ತು ನೇಮಕಾತಿ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳನ್ನು ಕ್ರೋಡೀಕರಿಸಿ ಅರ್ಹರ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ. ಈ ಅಭ್ಯರ್ಥಿಗಳ ಶೈಕ್ಷಣಿಕ ಮತ್ತು ಇತರ ದಾಖಲೆಗಳು ಹಾಗೂ ವೈದ್ಯಕೀಯ ಪ್ರಮಾಣಪತ್ರವನ್ನು ಪರಿಶೀಲಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.


ಅರ್ಜಿ ಸಲ್ಲಿಕೆಗೆ ಕೊನೇ ದಿನಾಂಕ: 30-12-23 


ಹೆಚ್ಚಿನ ಮಾಹಿತಿಗೆ:  https://kfdrecruitment.in/