-->

ಕರ್ನಾಟಕದಲ್ಲಿ ನಡೆಯಿತು ಹೀನ ಕೃತ್ಯ- ಮಹಿಳೆಯ ಬೆತ್ತಲೆಗೊಳಿಸಿ ವಿಕೃತಿ

ಕರ್ನಾಟಕದಲ್ಲಿ ನಡೆಯಿತು ಹೀನ ಕೃತ್ಯ- ಮಹಿಳೆಯ ಬೆತ್ತಲೆಗೊಳಿಸಿ ವಿಕೃತಿ


ಬೆಳಗಾವಿ: ಕರ್ನಾಟಕದಲ್ಲಿ ಹೀನ ಕೃತ್ಯವೊಂದು ನಡೆದಿದ್ದು, ಮಹಿಳೆಯನ್ನು ಬೆತ್ತಲೆ ಮಾಡಿ ಕಂಬಕ್ಕೆ ಕಟ್ಟಿ ಥಳಿಸಿರುವ  ಕೃತ್ಯ ಬೆಳಗಾವಿ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.


ಪ್ರೀತಿಸಿದ ಜೋಡಿ ಮನೆ ಬಿಟ್ಟು ಹೋಗಿದ್ದರಿಂದ ಯುವಕನ ತಾಯಿಯ ಮೇಲೆ ಯುವತಿಯ ಕುಟುಂಬಸ್ಥರು ದೌರ್ಜನ್ಯ ನಡೆಸಿದ್ದಾರೆ. 42 ವರ್ಷ ವಯಸ್ಸಿನ ಮಹಿಳೆ ಹಲ್ಲೆಗೆ ಒಳಗಾದವರು. ಕಂಬಕ್ಕೆ ಕಟ್ಟಿ ಬೆತ್ತಲೆ ಮಾಡಿ ಕೀಚಕರು ಅಮಾನವೀಯವಾಗಿ ವರ್ತಿಸಿದ್ದಾರೆ.


ಮಹಿಳೆಯ ಪುತ್ರ ಮತ್ತು ಯುವತಿ ಪರಸ್ಪರ ಪ್ರೀತಿಸುತ್ತಿದ್ದರು. ನಿನ್ನೆ ರಾತ್ರಿ ಮನೆ ಬಿಟ್ಟು ಈ ಪ್ರೇಮಿಗಳು ಓಡಿ ಹೋಗಿದ್ದಾರೆ. ಯವತಿಗೆ ಬೇರೆ ವರನನ್ನು ನೋಡಿದ್ದು, ಇಂದು ನಿಶ್ಚಿತಾರ್ಥ ಹಮ್ಮಿಕೊಳ್ಳಲಾಗಿತ್ತು. ಮದುವೆಯನ್ನು ಸಹ ಕುಟುಂಬಸ್ಥರು ನಿಗದಿ ಮಾಡಿದ್ದರು. ಇದರಿಂದ ರೊಚ್ಚಿಗೆದ್ದ ಯುವತಿ ಕುಟುಂಬಸ್ಥರು ಯುವಕನ ಮನೆ ಮೇಲೆ ದಾಳಿ ಮಾಡಿ, ಮನೆಯನ್ನು ಸಂಪೂರ್ಣ ಧ್ವಂಸಗೊಳಿಸಿದ್ದಾರೆ.

ಯುವತಿ ತಾಯಿಯನ್ನು ಬೆತ್ತಲೆಗೊಳಿಸಿ ಗ್ರಾಮದಲ್ಲಿ ಮೆರವಣಿಗೆ ಮಾಡಿದ್ದಾರೆ. ಅಲ್ಲದೇ ಗ್ರಾಮದಲ್ಲಿ ಕಂಬಕ್ಕೆ ಕಟ್ಟಿ ಮನಬಂದಂತೆ ಥಳಿಸಿದ್ದಾರೆ. ತಡರಾತ್ರಿ ಸ್ಥಳಕ್ಕೆ ಕಾಕತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ಸಂಬಂಧ 7 ಜನ ಆರೋಪಿಗಳನ್ನು ಬಂಧಿಸಲಾಗಿದೆ.


ಇಂದು ಬೆಳಗ್ಗೆ ನಗರ ಪೊಲೀಸ್ ಆಯುಕ್ತ ಎಸ್.ಎನ್.ಸಿದ್ದರಾಮಪ್ಪ ಅವರು ಕೂಡ ಗ್ರಾಮಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ಓಡಿ ಹೋಗಿರುವ ಯುವಕ, ಯುವತಿಗೆ ಪೊಲೀಸರ ಶೋಧ ಕಾರ್ಯ ಆರಂಭಿಸಿದ್ದಾರೆ. ಗ್ರಾಮದಲ್ಲಿ 2 ಕೆಎಸ್ ಆರ್ ಪಿ ತುಕಡಿ ಮತ್ತು ಪೊಲೀಸ್ ಬಂದೋಬಸ್ತ್​ ಅನ್ನು ಸಹ ನಿಯೋಜಿಸಲಾಗಿದೆ.

Ads on article

Advertise in articles 1

advertising articles 2

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100

  

Advertise under the article