-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಹಿಂಜಾವೇ ಪುತ್ತೂರು ಜಿಲ್ಲಾ ಸಹ ಸಂಯೋಜಕ ದಿನೇಶ್ ಪಂಜಿಗ ಗಡಿಪಾರು ನೊಟೀಸ್

ಹಿಂಜಾವೇ ಪುತ್ತೂರು ಜಿಲ್ಲಾ ಸಹ ಸಂಯೋಜಕ ದಿನೇಶ್ ಪಂಜಿಗ ಗಡಿಪಾರು ನೊಟೀಸ್



ಮಂಗಳೂರು: ಹಿಂದೂ ಜಾಗರಣ ವೇದಿಕೆ ಪುತ್ತೂರು ಜಿಲ್ಲಾ ಸಹಸಂಯೋಜಕ ದಿನೇಶ್ ಪಂಜಿಗ ಅವರ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 55ರಂತೆ ವಿಜಯಪುರ ಜಿಲ್ಲೆಯ ಸಿಂಧಗಿ ಪೊಲೀಸ್ ಠಾಣಾ ವ್ಯಾಪ್ತಿಗೆ ಯಾಕೆ ಗಡಿಪಾರು ಮಾಡಬಾರದು ಎಂದು ಕಾರಣ ಕೇಳುವ ಆದೇಶ ಮಾಡಿ ಉಪವಿಭಾಗೀಯ ದಂಡಾಧಿಕಾರಿ ನೊಟೀಸ್ ಜಾರಿ ಮಾಡಿದ್ದಾರೆ.


ಪುತ್ತೂರು ತಾಲೂಕಿನ ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶಾಂತಿಗೋಡು ಗ್ರಾಮದ ಪಂಜಿಗ ಮನೆ ಎಂಬಲ್ಲಿನ ದಿನೇಶ್ (37.ವ)ರವರು ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿನಾಕಾರಣ ಕ್ಷುಲ್ಲಕ ವಿಚಾರಗಳಿಗೆ ತನ್ನ ಸಹಚರರೊಂದಿಗೆ ತಕರಾರು ನಡೆಸಿ ದೊಂಬಿ, ಹಲ್ಲೆ ನಡೆಸುತ್ತಾ ಜನರಿಗೆ ಬೆದರಿಕೆ ಹಾಕಿರುವ ಪ್ರಕರಣದ ಆರೋಪಿಯಾಗಿದ್ದಾರೆ.

ಈತನ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ರೌಡಿ ಹಾಳೆಯನ್ನು ಕೂಡ ತೆರೆಯಲಾಗಿದ್ದು ಇತರ ಆಪಾದನೆಗಳ ಪ್ರಕರಣಗಳಿಗೆ ಸಂಬಂಧಿಸಿ ಗಡಿಪಾರು ಮಾಡುವ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆ ಮತ್ತು ಪುತ್ತೂರು ಉಪಾಅಧೀಕ್ಷಕರು ನೀಡಿದ ವರದಿಯಂತೆ ಉಪವಿಭಾಗದ ದಂಡಾಧಿಕಾರಿಯ ಆಗಿರುವ ಸಹಾಯಕ ಆಯುಕ್ತರು, ನಿಮ್ಮನ್ನು ಯಾಕೆ ಗಡಿಪಾರು ಮಾಡಬಾರದು ಎಂದು ದಿನೇಶ್ ಪಂಜಿಗ ಅವರಿಗೆ ಕಾರಣ ಕೇಳುವ ನೊಟೀಸ್ ಜಾರಿ ಮಾಡಿದ್ದು ಡಿ. 20ರಂದು ನ್ಯಾಯಾಲಯಕ್ಕೆ ಖುದ್ದು ಹಾಜರಾಗಿ ಅಥವಾ ವಕೀಲರ ಮೂಲಕ ಲಿಖಿತ ವಿವರಣೆ ನೀಡಬೇಕು. ಇಲ್ಲವಾದಲ್ಲಿ ಏಕಪಕ್ಷೀಯ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ