-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಬಂಟ್ವಾಳ: ತುಂಬೆ ವೆಂಟೆಡ್ ಡ್ಯಾಂ ಪಂಪ್ ಹೌಸ್ ಗೆ ರೈತರಿಂದ ಮುತ್ತಿಗೆ - ಬೀಗ ಜಡಿಯುವ ಯತ್ನ

ಬಂಟ್ವಾಳ: ತುಂಬೆ ವೆಂಟೆಡ್ ಡ್ಯಾಂ ಪಂಪ್ ಹೌಸ್ ಗೆ ರೈತರಿಂದ ಮುತ್ತಿಗೆ - ಬೀಗ ಜಡಿಯುವ ಯತ್ನ


ಬಂಟ್ವಾಳ: ಮಂಗಳೂರು ನಗರಕ್ಕೆ ಕುಡಿಯುವ ನೀರನ್ನು ಒದಗಿಸುವ ತುಂಬೆ ವೆಂಟೆಡ್ ಡ್ಯಾಂ ಪಂಪ್ ಹೌಸ್ ಗೆ ರೈತಸಂಘ ಮುತ್ತಿಗೆ ಹಾಕಿ, ಬೀಗ ಜಡಿಯುವ ಯತ್ನ ಇಂದು ನಡೆಸಿದೆ.

ತುಂಬೆ ವೆಂಟೆಡ್ ಡ್ಯಾಂನಿಂದ ರಭಸದಿಂದ ಹೊರಸೂಸುವ ನೀರಿನಿಂದ ಎಕರೆಗಟ್ಟಲೆ ಕೃಷಿ ಭೂಮಿ ನದಿ ಪಾಲಾಗುತ್ತಿದೆ ಎಂದು ಆರೋಪಿಸಿರುವ ರೈತಸಂಘ ತುಂಬೆ ವೆಂಟೆಡ್ ಡ್ಯಾಂಗೆ ಮುತ್ತಿಗೆ ಹಾಕಿ ಕಚೇರಿಗೆ ಬೀಗ ಜಡಿಯುವ ಪ್ರಯತ್ನ ನಡೆಸಿತ್ತು. ಈ ವೇಳೆ ಪೊಲೀಸರು, ಪಾಲಿಕೆ ಅಧಿಕಾರಿಗಳು ಹಾಗೂ ರೈತರ ನಡುವೆ ಮಾತಿನ ಚಕಮಕಿ ನಡೆದು ತಳ್ಳಾಟ, ನೂಕಾಟ ನಡೆದಿದೆ.

ಡ್ಯಾಂನ ಗೇಟ್ ಗೆ ಬೀಗ ಹಾಕಿ ಮುತ್ತಿಗೆ ಹಾಕಲು ಬಂದಿರುವ ರೈತರನ್ನು ಪೊಲೀಸರು ಗೇಟ್ ನಲ್ಲಿಯೇ ತಡೆದಿದ್ದಾರೆ. ಈ ವೇಳೆ ಪೋಲೀಸರು ಹಾಗೂ ರೈತರ ನಡುವೆ ತಳ್ಳಾಟ, ನೂಕಾಟ ನಡೆದಿದೆ. ಆಗ ರೈತರು ಮಂಗಳೂರು ಪಾಲಿಕೆ ಕಮಿಷನರ್ ಹಾಗೂ ಜಿಲ್ಲಾಧಿಕಾರಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಬಳಿಕ ಗೇಟ್ ಮುಂಭಾಗವೇ ಕುಳಿತು ಪಾಲಿಕೆ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ನದಿ ಕೊರೆತದಿಂದ ನಾಶವಾಗಿರುವ ಕೃಷಿ ಭೂಮಿಗೆ ಪರಿಹಾರ ಸಿಗದ ಹಿನ್ನೆಲೆಯಲ್ಲಿ ಅನೇಕ ಬಾರಿ ಅಧಿಕಾರಿಗಳಿಗೆ ಲಿಖಿತ ದೂರು ನೀಡಲಾಗಿತ್ತು. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಮುಂದಿನ ದಿನಗಳಲ್ಲಿ ಡ್ಯಾಂನಿಂದ ಮುಳುಗಡೆಯಾದ ಕೃಷಿ ಜಮೀನಿಗೆ ಪರಿಹಾರ ನೀಡಬೇಕು. ತಡೆಗೋಡೆ ನಿರ್ಮಾಣಕ್ಕೆ ಆಗ್ರಹಿಸಿ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತರು ಮುತ್ತಿಗೆ ಹಾಕುತ್ತಾರೆಂಬ ಮಾಹಿತಿ ಮೇರೆಗೆ ಡ್ಯಾಮ್ ಸುತ್ತಮುತ್ತ ಬಂಟ್ವಾಳ ಗ್ರಾಮಾಂತರ ಪೊಲೀಸ್ ಇನ್ ಸ್ಪೆಕ್ಟರ್ ಶಿವಕುಮಾರ್ ನೇತೃತ್ವದಲ್ಲಿ ಬಿಗಿ ಪೊಲೀಸ್ ಭದ್ರತೆಯನ್ನು ಒದಗಿಸಿದ್ದರು. ಹೆಚ್ಚುವರಿಯಾಗಿ ಕೆ.ಎಸ್.ಆರ್.ಪಿ ತುಕಡಿಯನ್ನು ಸ್ಥಳದಲ್ಲಿ ‌ನಿಯೋಜನೆ ಮಾಡಲಾಗಿತ್ತು.
ಪ್ರತಿಭಟನಾಕಾರರು ಆಗಮಿಸುವ ಮುನ್ನವೇ ಡ್ಯಾಂಗೆ ಬೀಗ ಹಾಕಿದ್ದ ಮಹಾನಗರ ಪಾಲಿಕೆ ಮುನ್ನೆಚ್ಚರಿಕೆ ಕ್ರಮ ವಹಿಸಿತ್ತು.

ಮಂಗಳೂರು ನಗರಕ್ಕೆ ನೀರು ಸರಬರಾಜು ಮಾಡುವ ತುಂಬೆ ಡ್ಯಾಂ ನೀರಿನಿಂದ ನದಿಯ ಇಕ್ಕೆಲಗಳಲ್ಲಿನ ಎಕರೆಗಟ್ಟಲೆ ಭೂಪ್ರದೇಶ ಕೊರೆತವಾಗಿ, ಕೃಷಿ ಭೂಮಿ ನೀರು ಪಾಲಾಗಿದೆ. ಇದೀಗ ಈ ಡ್ಯಾಮ್ ನಿಂದ ಹೊರಬರುತ್ತಿರುವ ನೀರಿನ ರಭಸದಿಂದ ಕೃಷಿಕರು ಕಂಗಾಲು ಆಗಿದ್ದಾರೆ. ಡ್ಯಾಮ್ ಸುತ್ತಮುತ್ತ ಸಮರ್ಪಕ ತಡೆಗೋಡೆ ನಿರ್ಮಿಸದೇ ಪಾಲಿಕೆ ನಿರ್ಲಕ್ಷ್ಯ ವಹಿಸಿರುವುದೇ ಇದಕ್ಕೆ ಕಾರಣವಾಗಿದೆ. ವರ್ಷದಿಂದ ವರ್ಷಕ್ಕೆ ನೇತ್ರಾವತಿ ನದಿ ಕೊರೆತ ಉಲ್ಬಣವಾಗಿದ್ದು, ಡ್ಯಾಮ್ ನಿಂದ ನೀರು ಹೊರ ಬರುವ ರಭಸಕ್ಕೆ ಕೃಷಿ ಭೂಮಿ ನದಿ ಪಾಲಾಗಿದೆ. ಅಡಿಕೆ, ತೆಂಗು, ಬಾಳೆಗಿಡ, ಕಾಳು ಮೆಣಸು ಮುಂತಾದ ಬೆಳೆಗಳು ನಾಶವಾಗಿದೆ. ಕೃಷಿಯನ್ನೇ ನಂಬಿಕೊಂಡ ಸುಮಾರು 9ಕ್ಕೂ ಅಧಿಕ ಕುಟುಂಬಗಳು ಕಂಗಾಲು ಆಗಿದ್ದಾರೆ. ಹಲವು ವರ್ಷದ ಬೇಡಿಕೆಗೆ ಸಿಗದ ಸ್ಪಂದನೆ ಹಿನ್ನೆಲೆ ಆಕ್ರೋಶ ವ್ಯಕ್ತಪಡಿಸಿದರು.

Ads on article

🎁 Amazon Prime ಸದಸ್ಯರಾಗಿರಿ

Amazon Prime Offer
👉 ಉಚಿತ shipping, Prime Video, shopping deals—all in one!

Disclosure: ಈ ಲಿಂಕ್ Amazon Affiliate Program ನ ಭಾಗವಾಗಿದೆ. ನೀವು ಈ ಲಿಂಕ್ ಮೂಲಕ Prime ಸದಸ್ಯರಾಗಿದರೆ, ನಮಗೆ commission ಸಿಗಬಹುದು.

Advertise in articles 1

advertising articles 2

Advertise under the article