ಮಂಗಳೂರು: ಮಹಾಕಾಳಿಪಡ್ಪು ರೈಲ್ವೆ ಅಂಡರ್ ಪಾಸ್ ಕಾಮಗಾರಿ ವೇಳೆ ಸ್ಲ್ಯಾಬ್ ಕುಸಿತ - ನಾಲ್ವರು ಕಾರ್ಮಿಕರಿಗೆ ಗಾಯ


ಮಂಗಳೂರು: ನಗರದ ಜೆಪ್ಪು ಮಹಾಕಾಳಿಪಡ್ಪುವಿನಲ್ಲಿ ನಡೆಯುತ್ತಿರುವ ರೈಲ್ವೆ ಅಂಡರ್ ಪಾಸ್ ಕಾಮಗಾರಿ ನಡೆಯುತ್ತಿದ್ದ ವೇಳೆ ಏಕಾಏಕಿ ಸ್ಲ್ಯಾಬ್ ಕುಸಿತಗೊಂಡು ನಾಲ್ವರು ಕಾರ್ಮಿಕರು ಗಾಯಗೊಂಡ ಘಟನೆ ಸೋಮವಾರ ಸಂಜೆ ನಡೆದಿದೆ.

ಸಂಜೆ 5.30ಗಂಟೆ ವೇಳೆಗೆ ಈ ಘಟನೆ ನಡೆದಿದೆ‌. ಒಟ್ಟು ಹನ್ನೆರಡು ಮಂದಿ ಕಾರ್ಮಿಕರು ಸ್ಲ್ಯಾಬ್ ಮೇಲೆ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಸ್ಲ್ಯಾಬ್ ಕುಸಿತಗೊಂಡಿದೆ‌. ಪರಿಣಾಮ ನಾಲ್ವರು ಕಾರ್ಮಿಕರಿಗೆ ಗಾಯಗೊಂಡಿದ್ದಾರೆ. ಆದರೆ ಸಣ್ಣಪುಟ್ಟ ಗಾಯಗಳಾಗಿದ್ದು, ನಾಲ್ವರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಮುಂಬೈನ ವಿಜಯ್ ಇನ್ಪ್ರಾ ಪ್ರಾಜೆಕ್ಟ್ ಪ್ರೈ ಲಿಮಿಟೆಡ್  ಗುತ್ತಿಗೆ ಕಂಪೆನಿ ಈ ಕಾಮಗಾರಿಯನ್ನು ನಡೆಸುತ್ತಿತ್ತು. ಇತ್ತೀಚೆಗೆ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಈ ಕಾಮಗಾರಿಯನ್ನು ಪರಿಶೀಲನೆ ನಡೆಸಿದ್ದರು.