ನವದೆಹಲಿ: 2010ರಲ್ಲಿ ಪ್ರಶ್ನೆಪತ್ರಿಕೆಯಲ್ಲಿ ಪ್ರವಾದಿ ಮೊಹಮ್ಮದ್‌ರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ ಪ್ರೊಫೆಸರ್ ಕೈಯನ್ನೇ ಕತ್ತರಿಸಿದ್ದ ಕೇರಳದ ಪ್ರಕರಣದ ಪ್ರಮುಖ ಆರೋಪಿಯನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಬಂಧಿಸಿದೆ.
ಸುಮಾರು 13 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಸವಾದ್‌ನನ್ನು ಕೇರಳದ ಕಣ್ಣೂರಿನಲ್ಲಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸವಾದ್‌ನನ್ನು ಹುಡುಕಿಕೊಟ್ಟರೆ 10 ಲಕ್ಷ ರು. ಬಹುಮಾನವನ್ನೂ ಈ ಹಿಂದೆ ಘೋಷಿಸಲಾಗಿತ್ತು.
ಏನಿದು ಪ್ರಕರಣ?: ಪ್ರಶ್ನೆಪತ್ರಿಕೆಯಲ್ಲಿ ಪ್ರವಾದಿ ಮೊಹಮ್ಮದ್ ರಿಗೆ ಅಪಹಾಸ್ಯ ಮಾಡಿ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ನಿಷೇಧಿತ ಪಿಎಫ್‌ಐ ಮತ್ತು ಎಸ್‌ಡಿಪಿಐನ ಕೆಲ ಕಾರ್ಯಕರ್ತರು ಪ್ರೊಫೆಸರ್ ಟಿ.ಜೆ ಜೋಸೆಫ್ ಅವರ ಅಂಗೈಯನ್ನೇ ಕತ್ತರಿಸಿದ್ದರು. ಅಲ್ಲದೇ ಅವರ ಹತ್ಯೆಗೂ ಪ್ರಯತ್ನಿಸಿದ್ದರು. ಈ ಪ್ರಕರಣದಲ್ಲಿ ಒಟ್ಟು 19 ಆರೋಪಿಗಳನ್ನು ಬಂಧಿಸಲಾಗಿದೆ. ಈ ಪೈಕಿ ಮೂವರಿಗೆ ಜೀವಾವಧಿ, ಮತ್ತು 8 ಜನರಿಗೆ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ.