ಪುತ್ತೂರು 16 ವರ್ಷದ- ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

ಪುತ್ತೂರು : 16  ವರ್ಷದ ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಈಶ್ವರಮಂಗಲ ಸಮೀಪದ ಸುಳ್ಯಪದವು ಕನ್ನಡ್ಕದಲ್ಲಿ ನಡೆದಿದೆ.

ಕನ್ನಡ್ಕ ನಿವಾಸಿ, ಫಿಲೋಮಿನಾ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ದೀಕ್ಷಾ (16ವ) ಆತ್ಮಹತ್ಯೆ ಮಾಡಿಕೊಂಡ ಯುವತಿ.

ದೀಕ್ಷಾ ಮನೆಯ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ದೀಕ್ಷಾ ವಾಣಿಜ್ಯ ವಿಭಾಗದಲ್ಲಿ ಕಲಿಯುತ್ತಿದ್ದು, ನಾಳೆ ಅವರಿಗೆ ಲ್ಯಾಬ್ ಪರೀಕ್ಷೆಯಿತ್ತು ಎಂದು ತಿಳಿದುಬಂದಿದೆ
BREAKING NEWS
Loading latest news...
Join our WhatsApp Channel Powered By : Online Pudu