ಮಂಗಳೂರು: ಭೀಕರ ರಸ್ತೆ ಅಪಘಾತಕ್ಕೆ ಮಹಿಳೆ ಗಂಭೀರ - ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ


ಮಂಗಳೂರು: ಅತಿ ವೇಗದಿಂದ ಚಲಾಯಿಸಿಕೊಂಡು ಬಂದ ಕಾರೊಂದು ರಸ್ತೆ ಬದಿಯಲ್ಲಿ ನಿಂತಿದ್ದ ಮಹಿಳೆ ಹಾಗೂ  ಓಮ್ನಿಗೆ ಭಾರೀ ರಭಸದಿಂದ ಡಿಕ್ಕಿ ಹೊಡೆದ ಘಟನೆ ದ.ಕ. ಜಿಲ್ಲೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಅಯ್ಯಪ್ಪನಗರದ ಬಳಿ ನಡೆದಿದೆ. ಘಟನೆಯಲ್ಲಿ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.




ಅಂಜಲಿ ಶೆಣೈ ಎಂಬವರು ಗಾಯಾಳು ಮಹಿಳೆ.

ಅತೀ ವೇಗದಿಂದ ಆಗಮಿಸಿದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯಲ್ಲಿ ನಿಂತಿದ್ದ ಮಹಿಳೆ ಹಾಗೂ ಓಮ್ನಿ ಕಾರಿಗೆ ರಭಸದಿಂದ ಡಿಕ್ಕಿಯಾಗಿ ನಿಲ್ಲದೆ ಪರಾರಿಯಾಗಿದೆ. ಅಪಘಾತದ ತೀವ್ರತೆಗೆ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ‌. ತಕ್ಷಣ ಸ್ಥಳೀಯರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಢಿಕ್ಕಿ ಹೊಡೆದು ಕಾರು ಸಹಿತ ಚಾಲಕ ಪರಾರಿಯಾಗಿದ್ದಾನೆ‌. ಆತ ಬಳಿಕ ಬೆಳ್ತಂಗಡಿ ಠಾಣೆಗೆ ಬಂದು ಶರಣಾಗಿದ್ದಾನೆ. ಅಫಘಾತದ ಭೀಕರ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BREAKING NEWS
Loading latest news...
Join our WhatsApp Channel Powered By : Online Pudu