ಸಂಕ್ರಾಂತಿ ದಿನವೇ ಭೀಕರ ರಸ್ತೆ ಅಪಘಾತ ಕಟಾವು ಯಂತ್ರಕ್ಕೆ ಬೈಕ್ ಢಿಕ್ಕಿ: ಒಂದೇ ಕುಟುಂಬ ನಾಲ್ವರು ಬಲಿ
Monday, January 15, 2024
ಚಾಮರಾಜನಗರ: ಸಂಕ್ರಾಂತಿ ಹಬ್ಬದ ಶುಭ ದಿನವೇ ಭೀಕರ ರಸ್ತೆ ಅಪಘಾತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿಯಾದ ಘಟನೆ ಕೊಳ್ಳೆಗಾಲದಲ್ಲಿ ನಡೆದಿದೆ.
ಕೊಳ್ಳೇಗಾಲ ತಾಲೂಕಿನ ಪಾಳ್ಯ ಗ್ರಾಮದ ನಿವಾಸಿಗಳಾದ ಸಂತೋಷ (37), ಸೌಮ್ಯ (27) ಹಾಗೂ ಮಕ್ಕಳಾದ ಸಾಕ್ಷಿ (4), ಅಭಿ (9) ಮೃತಪಟ್ಟವರು.
ಹಬ್ಬಕ್ಕೆ ಬಟ್ಟೆ ಖರೀಸಲು ಕೊಳ್ಳೇಗಾಲಕ್ಕೆ ಸಂತೋಷ್ ಕುಟುಂಬ ಬೈಕ್‌ನಲ್ಲಿ ತೆರಳುತ್ತಿತ್ತು. ಆದರೆ ಜಿನಕನಹಳ್ಳಿ ಸಮೀಪ ಭತ್ತ ಕತ್ತರಿಸುವ ಯಂತ್ರಕ್ಕೆ ಇವರು ಸಂಚರಿಸುತ್ತಿದ್ದ ಬೈಕ್ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬೈಕ್‌ನಿಂದ ನಾಲ್ವರೂ ರಸ್ತೆಗೆ ಬಿದ್ದಿದ್ದು ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಾಕ್ಷಿ ಎಂಬ ಬಾಲಕಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ದಾರಿಯಲ್ಲಿ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.
ಕೊಳ್ಳೇಗಾಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು.