ಪತ್ನಿಯ ಅಶ್ಲೀಲ ವೀಡಿಯೋ ವೈರಲ್ ಮಾಡುವ ಬೆದರಿಕೆ ಹಾಕಿದ ಗಂಡ
Friday, January 5, 2024
ಬೆಳಗಾವಿ: ಪತ್ನಿಯ ಅಶ್ಲೀಲ ವೀಡಿಯೋ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವ ಬೆದರಿಕೆ ಹಾಕುತ್ತಿದ್ದ ಗಂಡನನ್ನು ಪೊಲೀಸರು ಬಂಧಿಸಿದ್ದಾರೆ.
ಹುಕ್ಕೇರಿ ತಾಲೂಕಿನ ಅಮಣಗಿ ಗ್ರಾಮದ ಕಿರಣ ಪಾಟೀಲ್ ಬಂಧಿತ. ಈತನ ಮೊಬೈಲ್ ಪರಿಶೀಲಿಸಿದಾಗ ಪತ್ನಿಯ ಅಶ್ಲೀಲ ವೀಡಿಯೋಗಳು ಪತ್ತೆಯಾಗಿವೆ. ಬಂಧನ ಆಗುತ್ತಿದ್ದಂತೆಯೇ ಪೊಲೀಸರಿಂದ ತಪ್ಪಿಸಿಕೊಂಡು ವಿಷ ಕುಡಿದು ಆತ್ಮಹತ್ಯೆ ಮಾಡಿಕೊಳ್ಳುವ ನಾಟಕವಾಡಿದ್ದಾನೆ. ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚೇತರಿಸಿಕೊಂಡ ಬಳಿಕ ಜೈಲಿಗೆ ಕಳುಹಿಸಿದ್ದಾರೆ.
ಕಿರಣ ಪ್ರೀತಿಸಿ ಮದುವೆ ಮಾಡಿಕೊಂಡು ಕೆಲವು ತಿಂಗಳ ಬಳಿಕ ಪತ್ನಿಯನ್ನು ಪೀಡಿಸಲು ಆರಂಭಿಸಿದ್ದ. ಮತ್ತೊಬ್ಬಳನ್ನು ವಿವಾಹ ಮಾಡಿಕೊಳ್ಳಬೇಕೆಂಬ ದುರಾಸೆಯಿಂದ ಪತ್ನಿಗೆ ಕಿರುಕುಳ ನೀಡುತ್ತಿದ್ದ. ವಿಚ್ಚೇದನ ನೀಡುವಂತೆ ಪೀಡಿಸುತ್ತಿದ್ದ. ಇಲ್ಲದಿದ್ದರೆ ಅಶ್ಲೀಲ ವೀಡಿಯೋ, ಫೋಟೋಗಳನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದ, ಪತಿಯ ಮನವೊಲಿ ಸಲು ಯತ್ನಿಸಿದರೂ ಸಾಧ್ಯವಾಗದ ಕಾರಣ ಪತ್ನಿಯು ಪೊಲೀಸರಿಗೆ ದೂರು ನೀಡಿದ್ದಳು.