-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
BJP ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನಾಳೆ  ( ಜ. 30) ಮಂಗಳೂರಿಗೆ

BJP ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನಾಳೆ ( ಜ. 30) ಮಂಗಳೂರಿಗೆ

ದ.ಕ.ಜಿಲ್ಲಾ ಬಿಜೆಪಿ  ನೂತನ ಅಧ್ಯಕ್ಷರ  ಪದಗ್ರಹಣ ಸಮಾರಂಭದಲ್ಲಿ ಭಾಗಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ  ಘಟಕದ ನೂತನ ಅದ್ಯಕ್ಷರಾಗಿ ಆಯ್ಕೆಯಾದ  ಸತೀಶ್ ಕುಂಪಲ ಅವರ ಅಧಿಕಾರ ಪದಗ್ರಹಣ ಸಮಾರಂಭ  ಜನವರಿ 30,ಮಂಗಳವಾರದಂದು ಸಂಜೆ 4.30ಗಂಟೆಗೆ ನಗರದ ಹೊರವಲಯದ ಅಡ್ಯಾರ್ ಗಾರ್ಡನ್ ನಲ್ಲಿ ನಡೆಯಲಿದೆ.

 ಜಿಲ್ಲಾ ಬಿಜೆಪಿ  ಘಟಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ  ಸತೀಶ್ ಕುಂಪಲ ಅವರು  ಪ್ರಸಕ್ತ ಬಿಜೆಪಿ ಅಧ್ಯಕ್ಷರಾದ ಸುದರ್ಶನ ಮೂಡುಬಿದಿರೆ ಅವರಿಂದ ಅಧಿಕಾರ  ಸ್ವೀಕರಿಸಲಿದ್ದಾರೆ. ಸಮಾರಂಭಕ್ಕೆ  ಬಿಜೆಪಿ ರಾಜ್ಯಾಧ್ಯಕ್ಷರಾದ  ಬಿ.ವೈ.ವಿಜಯೇಂದ್ರ ರವರು ಆಗಮಿಸಲಿದ್ದು, ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ನ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಪ್ರಧಾನ ಕಾರ್ಯದರ್ಶಿಸುನಿಲ್ ಕುಮಾರ್ ,ರಾಜ್ಯ ಬಿಜೆಪಿ ಘಟಕದ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ಮತ್ತು ಜಿಲ್ಲೆಯ ಶಾಸಕರುಗಳಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ,ಉಮಾನಾಥ ಕೋಟ್ಯಾನ್, ರಾಜೇಶ್ ನಾಯ್ಕ್,ಭಾಗೀರಥಿ  ಮುರುಳ್ಯ,ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ,ಹರೀಶ್ ಪೂಂಜಾ,
 ಎಂ ಎಲ್ ಸಿ, ಪ್ರತಾಪ ಸಿಂಹ ನಾಯಕ್, ಸಹಿತ ಬಿಜೆಪಿ ಪಕ್ಷದ ಪ್ರಮುಖರು ಸಾಕ್ಷಿಯಾಗಲಿದ್ದಾರೆ.

 ಈ ಕಾರ್ಯಕ್ರಮಕ್ಕೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ  ಕಾರ್ಯಕರ್ತರು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಬೇಕೆಂದು ಸತೀಶ್ ಕುಂಪಲ ಅವರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ