ದಕ್ಷಿಣ ಕನ್ನಡ BJP ಜಿಲ್ಲಾಧ್ಯಕ್ಷರಾಗಿ ಸತೀಶ್ ಕುಂಪಲ ಆಯ್ಕೆ
Monday, January 15, 2024
ಲೋಕಸಭಾ ಚುನಾವಣೆ ಸಮೀಪಿಸುತ್ತಿರುವಂತೆಯೇ ಬಿಜೆಪಿ ಹಾಗೂ ಕಾಂಗ್ರೆಸ್‌ನಲ್ಲಿ ಪಕ್ಷದ ಜಿಲ್ಲಾಧ್ಯಕ್ಷರನೇಮಕ ಪ್ರಕ್ರಿಯೆ ಬಿರುಸುಗೊಂಡಿದೆ. ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಸತೀಶ್ ಕುಂಪಲ ಆಯ್ಕೆಯಾಗಿದ್ದಾರೆ.
ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿರುವ ಕಿಶೋರ್‌ಕುಮಾರ್ ಬೊಟ್ಯಾಡಿ, ಉಪಾಧ್ಯಕ್ಷರಾಗಿರುವ ಕಸ್ತೂರಿ ಪಂಜ ಹೆಸರೂ ಅಧ್ಯಕ್ಷ ಸ್ಥಾನಕ್ಕೆ ಕೇಳಿ ಬಂದಿತ್ತು.
ಸತೀಶ್ ಕುಂಪಲ ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷರಾಗಿ ಆಡಳಿತ ಅನುಭವಿ. ಮೂರು ಬಾರಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಆಗಿದ್ದರು. ಎರಡು ಬಾರಿ ಗ್ರಾಮ ಪಂಚಾಯ್ತಿ ಸದಸ್ಯರಾಗಿ, ಉಳ್ಳಾಲ ಮಂಡಲದ ಪ್ರಧಾನ ಕಾರ್ಯದರ್ಶಿಯೂ ಆಗಿದ್ದರು. ಅಸೆಂಬ್ಲಿ ಚುನಾವಣೆಯಲ್ಲಿ ಮಂಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಯು.ಟಿ.ಖಾದರ್ ವಿರುದ್ಧ ಬಿಜೆಪಿಯಿಂದ ಸ್ಪರ್ಧಿಸಿದ್ದರು.