ಬೆಳ್ತಂಗಡಿ: ಆತ್ಮಹತ್ಯೆಗೆ ಶರಣಾದ ಪದವಿ ವಿದ್ಯಾರ್ಥಿ


ಬೆಳ್ತಂಗಡಿ: ಇಲ್ಲಿನ ಖಾಸಗಿ ಕಾಲೇಜೊಂದರ ಪದವಿ ವಿದ್ಯಾರ್ಥಿಯೋರ್ವನು ತನ್ನ ಮನೆಯಲ್ಲಿಯೇ ನೇಣಿಗೆ ಶರಣಾಗಿರುವ ಘಟನೆ ಮಡಂತ್ಯಾರುವಿನಲ್ಲಿ ನಡೆದಿದೆ.

ಮಡಂತ್ಯಾರು ಮಾರಿಗುಡಿ ಹೊಸಮನೆ ನಿವಾಸಿ ಪ್ರತೀಕ್ ಬಾಳಿಗ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.

ಪ್ರತೀಕ್ ಬಾಳಿಗ ಪ್ರಥಮ ಬಿಎ ವಿದ್ಯಾರ್ಥಿಯಾಗಿದ್ದು, ಪ್ರಥಮ ಸೆಮಿಸ್ಟ‌ರ್ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ. ಆದರೆ ಗುರುವಾರ ಪರೀಕ್ಷೆ ಇಲ್ಲದ ಕಾರಣ ಕಾಲೇಜಿಗೆ ಹೋಗದೆ ಮನೆಯಲ್ಲೇ ಇದ್ದ‌. ಈ ಸಂದರ್ಭ ನೇಣಿಗೆ ಶರಣಾಗಿದ್ದಾನೆ. ಆದರೆ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.