-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಗೋರಿ ಧ್ವಂಸ ಪ್ರಕರಣ- ಮಾಧ್ಯಮಗಳಿಗೆ ಬುದ್ದಿವಾದ ಹೇಳಿದ CM

ಗೋರಿ ಧ್ವಂಸ ಪ್ರಕರಣ- ಮಾಧ್ಯಮಗಳಿಗೆ ಬುದ್ದಿವಾದ ಹೇಳಿದ CM

ಮುಖ್ಯಮಂತ್ರಿ ಗಳ ಫೇಸ್‌ಬುಕ್‌ ಖಾತೆಯಿಂದ


ಕೆಲವು ದೃಶ್ಯ ಮಾಧ್ಯಮಗಳಲ್ಲಿ ಬಾಬಾಬುಡನ್ ಗಿರಿಯಲ್ಲಿ ಗೋರಿ ದ್ವಂಸ ಪ್ರಕರಣವನ್ನು ರೀ ಓಪನ್ ಮಾಡಲಾಗಿದೆ ಎನ್ನುವ ಸುದ್ದಿ ಪ್ರಸಾರವಾಗುತ್ತಿದ್ದು, ಇದು ತಪ್ಪು ಮಾಹಿತಿ ಹಾಗೂ ಸಂಪೂರ್ಣ ಸುಳ್ಳು ಸುದ್ದಿಯಾಗಿದೆ. 

2017 ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ 2020 ರ ಮಾರ್ಚ್ 19 ರಂದು ವಿಚಾರಣೆಗೆ ಅನುಮತಿಗಾಗಿ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಅದರ ಆಧಾರದಲ್ಲಿ 2023 ರ ಸೆಪ್ಟೆಂಬರ್ 7ರಂದು ಸರ್ಕಾರ ಅನುಮತಿ ನೀಡಿತ್ತು. 
2023ರ ಅಕ್ಟೋಬರ್ 24 ರಂದು ಆರೋಪಿಗಳ ವಿರುದ್ಧ ಆರೋಪಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. ಬಳಿಕ ಕಾನೂನು ಪ್ರಕ್ರಿಯೆಯ ಮುಂದುವರೆದ ಭಾಗವಾಗಿ ಜನವರಿ 8ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಲಯದಿಂದಲೇ ಸಮನ್ಸ್ ಜಾರಿಯಾಗಿದೆ. 

ಇದು ಸಹಜ ಕಾನೂನು ಪ್ರಕ್ರಿಯೆ, ಇದರಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ. ರಾಜ್ಯ ಸರ್ಕಾರ ಪ್ರಕರಣದ ಮರು ತನಿಖೆಗೆ ಮುಂದಾಗಿದೆ ಎಂದು ಮಾಧ್ಯಮಗಳು ಸುಳ್ಳು ಸುದ್ದಿ ಬಿತ್ತರಿಸಿ, ಪ್ರಚೋದನೆ ನೀಡುವ ಕೆಲಸ ಮಾಡಬಾರದು.
ಇಂತಹ ಸುಳ್ಳು ಸುದ್ದಿ ಪ್ರಸಾರದಿಂದ ಮಾಧ್ಯಮಗಳು ವಿಶ್ವಾಸಾರ್ಹತೆ ಕಳೆದುಕೊಳ್ಳುತ್ತವೆ ಜೊತೆಗೆ ಕಾನೂನು ಸುವ್ಯವಸ್ಥೆ ಕೂಡ ಹದಗೆಡುವ ಸಾಧ್ಯತೆ ಅಲ್ಲಗಳೆಯಲಾಗದು. ಹೀಗಾಗಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು.
- ಮುಖ್ಯಮಂತ್ರಿ Siddaramaiah 

#MediaEthic

Ads on article

Advertise in articles 1

advertising articles 2

Advertise under the article

ಸುರ