-->
ಮಂಗಳೂರಿನಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಸಮಾವೇಶ ಮುಂದೂಡಿಕೆ

ಮಂಗಳೂರಿನಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಸಮಾವೇಶ ಮುಂದೂಡಿಕೆ



ಮಂಗಳೂರು: ಮಂಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಕಾಂಗ್ರೆಸ್ ಸಮಾವೇಶವನ್ನು ಮುಂದೂಡಲಾಗಿದೆ.


ಜನವರಿ 21 ರಂದು ಮಂಗಳೂರಿನ ಅಡ್ಯಾರ್ ಸಹ್ಯಾದ್ರಿ ಕಾಲೇಜಿನ ಮೈದಾನದಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯ ಮಟ್ಟದ ಸಮಾವೇಶ ನಡೆಸಲು ತೀರ್ಮಾನಿಸಲಾಗಿತ್ತು. ಈ ಸಭೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಹಿತ ಕಾಂಗ್ರೆಸ್ ಮುಖಂಡರು ಬರುವುದು ನಿಶ್ಚಯವಾಗಿತ್ತು.


ಆದರೆ ಇದೀಗ ಕಾಂಗ್ರೆಸ್ ಸಮಾವೇಶವನ್ನು ಮುಂದೂಡಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.  ಈ ಬಗ್ಗೆ ಪ್ರಕಟನೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ 

21-01-2024 ರಂದು ಮಂಗಳೂರು ನಗರದಲ್ಲಿ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಮುಂದೂಡಲಾಗಿದೆ. ಸಮಾವೇಶ ನಡೆಸುವ ಮುಂದಿನ ದಿನಾಂಕವನ್ನು ಶೀಘ್ರದಲ್ಲಿಯೇ ತಿಳಿಸಲಾಗುವುದು ಎಂದು ತಿಳಿಸಿದ್ದಾರೆ.



Ads on article

Advertise in articles 1

advertising articles 2

Advertise under the article