-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ನಿಯಂತ್ರಣ ತಪ್ಪಿದ ಕಾರು ಡಿವೈಡರ್ ಡಿಕ್ಕಿ : ಹೊಸ ವರ್ಷದ ದಿನವೇ ಆರು ಮಂದಿ ದಾರುಣ ಸಾವು

ನಿಯಂತ್ರಣ ತಪ್ಪಿದ ಕಾರು ಡಿವೈಡರ್ ಡಿಕ್ಕಿ : ಹೊಸ ವರ್ಷದ ದಿನವೇ ಆರು ಮಂದಿ ದಾರುಣ ಸಾವು


ರಾಂಚಿ: ನಿಯಂತ್ರಣ ತಪ್ಪಿದ ಕಾರು ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಆರು ಮಂದಿ ದಾರುಣವಾಗಿ ಮೃತಪಟ್ಟಿರುವ ಘಟನೆ ಜಾರ್ಖಂಡ್‌ನ ಜಮೈಡ್‌ಪುರದಲ್ಲಿ ಸೋಮವಾರ ಹೊಸ ವರ್ಷದ ದಿನವೇ ನಡೆದಿದೆ.

ಅಪಘಾತಕ್ಕೊಳಗಾದ ಕಾರಿನಲ್ಲಿ ಒಟ್ಟು 8 ಮಂದಿ ಪ್ರಯಾಣಿಸುತ್ತಿದ್ದರು. ಕಾರಿನಲ್ಲಿದ್ದವರು ಆದಿತ್ಯಪುರ ನಿವಾಸಿಗಳೆಂದು ತಿಳಿದು ಬಂದಿದೆ.‌ ಕಾರು ನಿಯಂತ್ರಣ ತಪ್ಪಿ ಡಿವೈಡರ್‌ ಢಿಕ್ಕಿಯಾದ ರಭಸಕ್ಕೆ ಐವರು ಸ್ಥಳದಲ್ಲೇ ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡ ಮತ್ತೊಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇಬ್ಬರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ