-->

ಪುತ್ತೂರು: ಬಿಜೆಪಿ ಮುಖಂಡ, ಕುಂಬ್ರ ಸೊಸೈಟಿ ಅಧ್ಯಕ್ಷನ ಪತ್ನಿಯ ಮೃತದೇಹ ನೀರಿನ ತೊಟ್ಟಿಯಲ್ಲಿ ಪತ್ತೆ

ಪುತ್ತೂರು: ಬಿಜೆಪಿ ಮುಖಂಡ, ಕುಂಬ್ರ ಸೊಸೈಟಿ ಅಧ್ಯಕ್ಷನ ಪತ್ನಿಯ ಮೃತದೇಹ ನೀರಿನ ತೊಟ್ಟಿಯಲ್ಲಿ ಪತ್ತೆ

ಪುತ್ತೂರು: ಇಲ್ಲಿನ ಕುಂಬ್ರ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ, ಬಿಜೆಪಿ ಮುಖಂಡ ಪ್ರಕಾಶ್ಚಂದ್ರ ಕೈಕಾರ ಎಂಬವರ ಪತ್ನಿಯ ಮೃತದೇಹ ನೀರಿನ ತೊಟ್ಟಿಯಲ್ಲಿ ಪತ್ತೆಯಾಗಿದೆ.

ಶುಭಲಕ್ಷ್ಮಿ ಮೃತಪಟ್ಟಿರುವ ಮಹಿಳೆ.

ಪುತ್ತೂರಿನ ಒಳಮೊಗ್ರು ಗ್ರಾಮದ ಕೈಕಾರದಲ್ಲಿರುವ ಅವರ ಮನೆಯ ಸಮೀಪದ ನೀರಿನ ತೊಟ್ಟಿಯಲ್ಲಿ ಶುಭಲಕ್ಷ್ಮಿಯವರ ಮೃತದೇಹ ಪತ್ತೆಯಾಗಿದೆ. ಮನೆಯ ಗುಡ್ಡದ ಮೇಲೆ ಮಣ್ಣಿನ ಟ್ಯಾಂಕ್ ನಿರ್ಮಿಸಿದೆ. ಅದಕ್ಕೆ ಟಾರ್ಪಾಲು ಹಾಕಿ ನೀರು ನಿಲ್ಲಿಸಲಾಗಿತ್ತು. ಬೆಳಗ್ಗೆ 11 ಗಂಟೆವರೆಗೆ ಪ್ರಕಾಶ್ಚಂದ್ರ ರೈ ಕೈಕಾರ ಅವರು ಮನೆಯಲ್ಲಿದ್ದು ಬಳಿಕ ಹೊರಗೆ ತೆರಳಿದ್ದರು. ಮಧ್ಯಾಹ್ನ 1.30ಗೆ ಮನೆಗೆ ಬಂದಾಗ ಮನೆಯಲ್ಲಿ ಪತ್ನಿ ಇರಲಿಲ್ಲ. ಹುಡುಕಾಟದ ವೇಳೆ ತೊಟ್ಟಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಪುತ್ರಿ ಕಾಲೇಜಿಗೆ ಹೋಗಿದ್ದು ಮನೆಯಲ್ಲಿ ಕೆಲಸದವರು ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಕಾಲುಜಾರಿ ಪತ್ನಿ ನೀರಿನ ತೊಟ್ಟಿಗೆ ಬಿದ್ದಿದ್ದು, ಆ ಸಂದರ್ಭ ಯಾರೂ ಇಲ್ಲದ ಕಾರಣ ಅಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪತಿ ಪ್ರಕಾಶ್ಚಂದ್ರ ಗ್ರಾಮಾಂತರ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಆತ್ಮಹತ್ಯೆಯೋ, ಘಟನೆ ಹೇಗಾಗಿದೆ ಎನ್ನುವ ಬಗ್ಗೆ ತನಿಖೆ ನಡೆಸುತ್ತೇವೆ ಎಂದು ಸಂಪ್ಯ ಎಸ್‌ಐ ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆ ಸಂದರ್ಭದಲ್ಲಿ ಆಸ್ಪತ್ರೆಗೆ ಸಂಸದ ನಳಿನ್ ಕುಮಾರ್ ಕಟೀಲು, ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಮುಖಂಡರಾದ ಗೋಪಾಲಕೃಷ್ಣ ಹೇರಳೆ, ಸಾಜ ರಾಧಾಕೃಷ್ಣ ಆಳ್ವ ಶಶಿಕುಮಾರ್ ರೈ ಬಾಲ್ಗೊಟ್ಟು ಮತ್ತಿತರರು ಭೇಟಿ ನೀಡಿದ್ದರು.


Ads on article

Advertise in articles 1

advertising articles 2

Advertise under the article