ಬೆಳ್ತಂಗಡಿ: ಕಾಲುಜಾರಿ ಬಾವಿಗೆ ಬಿದ್ದು ಬಾಲಕ ಮೃತ್ಯು

ಬೆಳ್ತಂಗಡಿ: ಮಕ್ಕಳೊಂದಿಗೆ ಆಟವಾಡುತ್ತಿದ್ದ ವೇಳೆ ಏಳರ ಬಾಲಕನೊಬ್ಬ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಸೋಣಂದೂರು ಗ್ರಾಮದ ಪಣಕಜೆ ಎಂಬಲ್ಲಿ ನಡೆದಿದೆ.

ಪಣಕಜೆ ನಿವಾಸಿ ಮುಹಮ್ಮದ್ ಅನಾನ್ (7) ಮೃತಪಟ್ಟ ಬಾಲಕ. ಅನಾನ್ ಎರಡನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಸೋಮವಾರ ಶಾಲೆಗೆ ರಜೆಯಿದ್ದ ಕಾರಣ ಪಕ್ಕದ ಮನೆಯ ಮಕ್ಕಳೊಂದಿಗೆ ಆಟವಾಡುತ್ತಿದ್ದ. ಈ ವೇಳೆ ಕಟ್ಟೆಯಿಲ್ಲದ ಬಾವಿಗೆ ಬಾಲಕ ಅನಾನ್ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದಾನೆ.

ತಕ್ಷಣ ಸ್ಥಳೀಯರ ಸಹಕಾರದಲ್ಲಿ ಬಾಲಕನನ್ನು ಮೇಲಕ್ಕೆತ್ತಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಆದರೆ ಅಷ್ಟರಲ್ಲಿ ಬಾಲಕ ಮೃತಪಟ್ಟಿರುವುದಾಗಿ ವರದಿಯಾಗಿದೆ. ಪುಂಜಾಲಕಟ್ಟೆ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
BREAKING NEWS
Loading latest news...
Join our WhatsApp Channel Powered By : Online Pudu